ಬೆಂಗಳೂರು : ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕಾರಾಗೃಹಗಳ ಸುಧಾರಣೆ ಮುಖ್ಯ. ಈ ಬಗ್ಗೆ ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕಿದೆ. ಬೈಲಹೊಂಗಲ ಕಾರಾಗೃಹ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲೂ ನಾನು ಕೆಲಸ ಮಾಡಿದ್ದು, ಇರುವ ಸಮಸ್ಯೆ ಅರಿತು ಅದನ್ನು ಪರಿಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್ ಅವರನ್ನ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಇತ್ತೀಚೆಗೆ, ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಮಾದಕ ವಸ್ತು ಹಾಗೂ ಸಿಗರೇಟ್ ಪ್ಯಾಕ್‌ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್‌ನನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಇಎಸ್‌ಎಫ್) ಅಧಿಕಾರಿಗಳು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…