ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಮತ್ತಿಬ್ಬರನ್ನು ಎನ್‌ಐಎ ವಶಕ್ಕೆ ಪಡೆದಿದೆ. ಶಂಕಿತರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯದ ಹಲವೆಡೆ ಎನ್‌ಐಎ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಮೇಶ್ವರಂ ಕೆಫೆ ಸ್ಫೋಟ ಹಾಗೂ ಹಳೇ ಪ್ರಕರಣಗಳ ನಡುವೆ ಸಾಮ್ಯತೆ ಇರಬಹುದು ಎನ್ನಲಾಗಿದೆ. ಹೀಗಾಗಿ ಹಳೇ ಪ್ರಕರಣಗಳಲ್ಲಿ ಭಾಗಿಯಾದ ಹಲವರ ಮೇಲೆ ಎನ್ಐಎ ನಿಗಾವಹಿಸಿದೆ.
ಈಗಾಗಲೇ ಜೈಲಿನಲ್ಲಿರುವ ಹಲವರನ್ನು ಎನ್‌ಐಎ ವಿಚಾರಣೆ ನಡೆಸಿದೆ. ತಲೆಮರೆಸಿಕೊಂಡಿರುವ ಇನ್ನೂ ಕೆಲವರ ಪತ್ತೆಗೆ ಬಲೆ ಬೀಸಿದೆ. ಶಂಕಿತರಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನೆರವು ನೀಡಿದವರ ಮೇಲೆ ಎನ್ಐಎ ಕಣ್ಣಿಟ್ಟಿದೆ. ಅಂಥವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತಿದೆ.
ಅನುಮಾನಸ್ಪದ ವ್ಯಕ್ತಿಗಳಿಂದ ಸ್ಫೋಟ ನಡೆಸಿದವರ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ತಾಂತ್ರಿಕವಾಗಿ ಅಥವಾ ಮೌಖಿಕವಾಗಿ ಮಾಹಿತಿ ಲಭ್ಯವಾಗಬಹುದು. ಆದ್ದರಿಂದ ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸುತ್ತಿದೆ. ಆ ಮೂಲಕ ಸ್ಫೋಟ ನಡೆಸಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.
ಮೊಬೈಲ್ ಕರೆಗಳು, ವಾಟ್ಸಪ್ ಚಾಟಿಂಗ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬಾಂಬ್ ಸ್ಫೋಟ ಮಾಡಿದ ಆರೋಪಿಗಳ ಪತ್ತೆಗೆ ಎನ್ಐಎ ತಲಾಷ್ ನಡೆಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…