Featured

ಬೆಂಗಳೂರು ಕೆಫೆ ಬ್ಲಾಸ್ಟ್‌ ಪ್ರಕರಣ : ಮತ್ತಿಬ್ಬರು NIA ವಶಕ್ಕೆ – vishwanews24

ಬೆಂಗಳೂರು ಕೆಫೆ ಬ್ಲಾಸ್ಟ್‌ ಪ್ರಕರಣ : ಮತ್ತಿಬ್ಬರು NIA ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌  ಪ್ರಕರಣದಲ್ಲಿ ಮತ್ತಿಬ್ಬರನ್ನು ಎನ್‌ಐಎ  ವಶಕ್ಕೆ ಪಡೆದಿದೆ. ಶಂಕಿತರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯದ ಹಲವೆಡೆ ಎನ್‌ಐಎ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಮೇಶ್ವರಂ ಕೆಫೆ ಸ್ಫೋಟ ಹಾಗೂ ಹಳೇ ಪ್ರಕರಣಗಳ ನಡುವೆ ಸಾಮ್ಯತೆ ಇರಬಹುದು ಎನ್ನಲಾಗಿದೆ. ಹೀಗಾಗಿ ಹಳೇ ಪ್ರಕರಣಗಳಲ್ಲಿ ಭಾಗಿಯಾದ ಹಲವರ ಮೇಲೆ ಎನ್ಐಎ ನಿಗಾವಹಿಸಿದೆ.

ಈಗಾಗಲೇ ಜೈಲಿನಲ್ಲಿರುವ ಹಲವರನ್ನು ಎನ್‌ಐಎ ವಿಚಾರಣೆ ನಡೆಸಿದೆ. ತಲೆಮರೆಸಿಕೊಂಡಿರುವ ಇನ್ನೂ ಕೆಲವರ ಪತ್ತೆಗೆ ಬಲೆ ಬೀಸಿದೆ. ಶಂಕಿತರಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನೆರವು ನೀಡಿದವರ ಮೇಲೆ ಎನ್ಐಎ ಕಣ್ಣಿಟ್ಟಿದೆ. ಅಂಥವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತಿದೆ.

ಅನುಮಾನಸ್ಪದ ವ್ಯಕ್ತಿಗಳಿಂದ ಸ್ಫೋಟ ನಡೆಸಿದವರ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ತಾಂತ್ರಿಕವಾಗಿ ಅಥವಾ ಮೌಖಿಕವಾಗಿ ಮಾಹಿತಿ ಲಭ್ಯವಾಗಬಹುದು. ಆದ್ದರಿಂದ ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸುತ್ತಿದೆ. ಆ ಮೂಲಕ ಸ್ಫೋಟ ನಡೆಸಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಬಲೆ‌ ಬೀಸಿದೆ.

ಮೊಬೈಲ್ ಕರೆಗಳು, ವಾಟ್ಸಪ್ ಚಾಟಿಂಗ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬಾಂಬ್ ಸ್ಫೋಟ ಮಾಡಿದ ಆರೋಪಿಗಳ ಪತ್ತೆಗೆ ಎನ್ಐಎ ತಲಾಷ್ ನಡೆಸಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago