ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್ಡೌನ್ ಘೋಷಣೆಯಾಗಿದೆ. ಅಗತ್ಯ ಸೇವೆ ಬಿಟ್ಟು
ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಇಂದು ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ ರಾತ್ರಿ 9 ಗಂಟೆಯವರೆಗೆ ಯಾವೆಲ್ಲ ಅಂಗಡಿಗಳು
ತೆರೆದಿರಬೇಕು ಎಂಬುದರ ಬಗ್ಗೆ ಮತ್ತೊಂದು ಮಾರ್ಗಸೂಚಿಯನ್ನು ಹೊರಡಿಸಿದೆ.
ಹೊಸ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ. ಯಾರಿಗೆಲ್ಲ ಅನುಮತಿ?
1) ದಿನಸಿ, ಹಣ್ಣು, ತರಕಾರಿ ಡೈರಿ, ಮಾಂಸ, ಔಷಧಿ, ಪ್ರಾಣಿಗಳ ಆಹಾರದ ಅಂಗಡಿಗೆ ಅನುಮತಿ
2) ಹೋಲ್ ಸೇಲ್ ತರಕಾರಿ, ಹಣ್ಣು ಹೂವು ಅಂಗಡಿ ತೆರೆಯಬಹುದು
3) ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ವಾರ್ಸಲ್ಗಳಿಗೆ ಮಾತ್ರ ಅವಕಾಶ
4) ಹೊಟೇಲ್, ಲಾಡ್ಡಿಂಗ್ ಹೊರಗಿನಿಂದ ಬಂದ ಅತಿಥಿಗಳಿಗೆ ಮಾತ್ರ ಅನುಮತಿ
5) ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ
6) ಬ್ಯಾಂಕ್, ಎಟಿಎಂ ಇನ್ನರೆನ್ಸ್ ಕಂಪನಿಗಳಿಗೆ ತೆರೆಯಲು ಅವಕಾಶ
7) ಪೇಪರ್, ಟಿವಿ, ಮೀಡಿಯಾ ಕಂಪನಿಗಳಿಗೆ ತೆರೆಯಲು ಅವಕಾಶವಿದೆ
8) ಇ-ಕಾಮರ್ಸ್ ಸೇವೆಯ ಕಚೇರಿಗಳಿಗೆ ತರೆಯಬಹುದು
9) ಶೇರ್ ಮಾರ್ಕೇಟ್ ನಡೆಸುವ ಸೇವಾ ಕಚೇರಿ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಗಳ ತೆರೆಯಲು ಅನುಮತಿ
10) ಖಾಸಗಿ ಸೆಕ್ಯೂರಿಟಿ ಏಜೆನ್ಸಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ತೆರೆಯಲು ಅವಕಾಶ
11) ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿಗೆ ಅವಕಾಶ
ಈ ಮೇಲಿನ ಬಿಟ್ಟು ಉಳಿದ ಎಲ್ಲ ಅಂಗಡಿಗಳು ಮುಚ್ಚುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…