ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಸಂಬಂಧ ಉಂಟಾಗಿರುವಂತ ಆಸ್ತಿ-ಪಾಸ್ತಿಯ ನಷ್ಟವನ್ನು ಸುಪ್ರೀಂ ಕೋರ್ಟ್ ಆದೇಶದನ್ವಯ ಆರೋಪಿಗಳಿಂದಲೇ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಕುರಿತಂತೆ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸದ್ಯ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲೇ ತನಿಖೆ ನಡೆಯುತ್ತಿದೆ. ಪೊಲೀಸ್ ಇಲಾಖೆಯೂ ಗಲಭೆಯ ತನಿಖೆ ಮಾಡ್ತಿದೆ. ತನಿಖೆ ಮುಗಿಯೋವರೆಗೂ ಬೇರೆ ತನಿಖೆ ನಡೆಸುವುದಿಲ್ಲ. ಸದ್ಯಕ್ಕೆ ಈ ಎರಡೂ ತನಿಖೆಗಳಿಗೆ ಸರ್ಕಾರ ಬದ್ಧವಾಗಿದೆ. ಸಿಬಿಐ, ಎನ್ ಐ ಎ ತನಿಖೆಯ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ತಿಳಿಸಿದರು.
ಗಲಭೆಕೋರರ ಹಿಂದೆ ಉಗ್ರ ಸಂಘಟನೆ ಲಿಂಕ್ ಇದ್ಯಾ ಎನ್ನುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ಹಿನ್ನಲೆ ಕೂಡ ತನಿಖೆ ನಡೆಸಲಾಗುತ್ತದೆ. ವಿಚಾರಣೆಗೆ 3 ಸದಸ್ಯರನ್ನೊಳಗೊಂಡ ವಿಶೇಷ ಅಭಿಯೋಜಕರ ತಂಡ ರಚನೆ ಮಾಡಲಾಗಿದೆ. ಗೂಂಡಾ ಕಾಯ್ದೆಯಡಿ ಕೂಡ ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದ ಅವರು ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲಾಗುತ್ತದೆ. ಆಸ್ತಿ ಪಾಸ್ತಿ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಎಜಿ ಕರೆಸಿ ಮಾಹಿತಿಯನ್ನು ಸಿಎಂ ಅವರು ಪಡೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದನ್ವಯ ಆಸ್ತಿ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಹೇಳಿದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…