ಬೆಂಗಳೂರು ಗಲಭೆ ಸೃಷ್ಟಿಸಿದ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಿ, ಸರ್ಕಾರಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿಯೋರ್ವ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆಂಬ ಕಾರಣಕ್ಕೆ ಕೆ.ಕಿ ಹಳ್ಳಿ, ಡಿ.ಜೆ ಹಳ್ಳಿ, ಕಾವಲ್ ಬೈರಸಂದ್ರದಲ್ಲಿ ಗಲಭೆ ಸೃಷ್ಟಿಸಿ ಬೆಂಕಿ ಹಾಕಿದ ಘಟನೆ ಹಾಗೂ ಪೋಸ್ಟ್ ಹಾಕುವ ಮೂಲಕ ಪ್ರಚೋಧನೆ ನೀಡಿರುವುದನ್ನು ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ಖಂಡಿಸಿದ್ದಾರೆ.
”ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ” ಎಂದು ಹೇಳಿದ್ದಾರೆ.
”ಇಂತಹ ಕೋಮು ಗಲಭೆಗಳಲ್ಲಿ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.
”ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ ಕಳೆದು ಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…