ಬೆಂಗಳೂರು ಗಲಭೆ ಪೂರ್ವ ನಿಯೋಜಿತ ಷಡ್ಯಂತ್ರ :ಬಸವರಾಜ ಬೊಮ್ಮಾಯಿ -Vishwanews24

ಉಡುಪಿ: ಬೆಂಗಳೂರು ಗಲಬೆಗೆ‌ ಸಂಬಂಧಿಸಿ ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದು, ಇದು ಪೂರ್ವ ನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಂಡಾಟದ ಮೂಲಕ ಸಮಾಜ ಹದಗೆಡಿಸಲು ಹಲವು ಪ್ರಯತ್ನ ಮಾಡಿದ್ದಾರೆ. ಗಲಬೆ ನಿಯಂತ್ರಣ ಸಂಪೂರ್ಣ ತಪ್ಪಿದಾಗ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮನಸೋಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ. ಮೂರು ಜನ ಗೋಲಿಬಾರ್ ನಲ್ಲಿ ಅಸುನೀಗಿದ್ದಾರೆ.ಪೊಲೀಸರಿಗೂ ಕಲ್ಲುತೂರಾಟದಿಂದ ಗಾಯಗಳಾಗಿವೆ. ಓರ್ವ ಪೋಲೀಸ್ ತಲೆಗೆ ಗಂಭೀರ ಗಾಯವಾಗಿದೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಸಚಿವ ತಿಳಿಸಿದರು. ಈಗಾಗಲೇ 110 ಜನ ಬಂಧನವಾಗಿದ್ದು, ಬಂಧನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಥಮ ಆದ್ಯತೆಯಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡುತ್ತಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿದ್ದಾರೆ.

ಮೂರು ಹೈದರಾಬಾದಿನಿಂದ ಮೂರು ಚೆನ್ನೈನಿಂದ ಬರ್ತಾ ಇದೆ. ಆರು ಕಂಪನಿಯನ್ನು ಎಲ್ಲಿಡಿಪ್ಲೈ ಮಾಡಬೇಕು ಅನ್ನೋದನ್ನ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ರ್ಯಾಪಿಡ್ ಅಕ್ಷನ್ ಫಾರ್ಸ್ ಬರ್ತಾಯಿದೆ.ಗರುಡ ಫೋರ್ಸ್ ಕೂಡ ಸ್ಥಳದಲ್ಲಿದೆ.ಪುಂಡರ ಹಿಂದೆ ಯಾರಿದ್ದಾರೆ ಎಂದು ತನಿಖೆ ಮಾಡುತ್ತೇವೆ. ಸಿಎಂ ಜೊತೆ ಬೆಳಗ್ಗೆ ಬಗ್ಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಸಿಎಂ ಮತ್ತು ಹಿರಿಯ ಅಧಿಕಾರಿ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ.

ಸಿಸಿ ಕ್ಯಾಮರ ದಾಖಲೆ ಪೊಲೀಸ್ ಠಾಣೆಯ ದಾಖಲೆ ಸಂಗ್ರಹಿಸುತ್ತೇವೆ. ಪುಂಡಾಟಿಕೆ ಮುಂಚೂಣಿಯಲ್ಲಿದ್ದವರ ಮಾಹಿತಿ ಸಂಗ್ರಹವಾಗುತ್ತಿದೆ ಎಂದು‌ ಸಚಿವರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago