ಉಡುಪಿ: ಬೆಂಗಳೂರು ಗಲಬೆಗೆ ಸಂಬಂಧಿಸಿ ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದು, ಇದು ಪೂರ್ವ ನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಂಡಾಟದ ಮೂಲಕ ಸಮಾಜ ಹದಗೆಡಿಸಲು ಹಲವು ಪ್ರಯತ್ನ ಮಾಡಿದ್ದಾರೆ. ಗಲಬೆ ನಿಯಂತ್ರಣ ಸಂಪೂರ್ಣ ತಪ್ಪಿದಾಗ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮನಸೋಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ. ಮೂರು ಜನ ಗೋಲಿಬಾರ್ ನಲ್ಲಿ ಅಸುನೀಗಿದ್ದಾರೆ.ಪೊಲೀಸರಿಗೂ ಕಲ್ಲುತೂರಾಟದಿಂದ ಗಾಯಗಳಾಗಿವೆ. ಓರ್ವ ಪೋಲೀಸ್ ತಲೆಗೆ ಗಂಭೀರ ಗಾಯವಾಗಿದೆ.
ಮೂರು ಹೈದರಾಬಾದಿನಿಂದ ಮೂರು ಚೆನ್ನೈನಿಂದ ಬರ್ತಾ ಇದೆ. ಆರು ಕಂಪನಿಯನ್ನು ಎಲ್ಲಿಡಿಪ್ಲೈ ಮಾಡಬೇಕು ಅನ್ನೋದನ್ನ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ರ್ಯಾಪಿಡ್ ಅಕ್ಷನ್ ಫಾರ್ಸ್ ಬರ್ತಾಯಿದೆ.ಗರುಡ ಫೋರ್ಸ್ ಕೂಡ ಸ್ಥಳದಲ್ಲಿದೆ.ಪುಂಡರ ಹಿಂದೆ ಯಾರಿದ್ದಾರೆ ಎಂದು ತನಿಖೆ ಮಾಡುತ್ತೇವೆ. ಸಿಎಂ ಜೊತೆ ಬೆಳಗ್ಗೆ ಬಗ್ಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಸಿಎಂ ಮತ್ತು ಹಿರಿಯ ಅಧಿಕಾರಿ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ.
ಸಿಸಿ ಕ್ಯಾಮರ ದಾಖಲೆ ಪೊಲೀಸ್ ಠಾಣೆಯ ದಾಖಲೆ ಸಂಗ್ರಹಿಸುತ್ತೇವೆ. ಪುಂಡಾಟಿಕೆ ಮುಂಚೂಣಿಯಲ್ಲಿದ್ದವರ ಮಾಹಿತಿ ಸಂಗ್ರಹವಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…