ಮಂಗಳೂರು: ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.
” ಲೋಕಕ್ಕೆ ಸೌಹಾರ್ದತೆ,ಸಮಾನತೆ ಹಾಗೂ ಮಾನವೀಯತೆ ಸಾರಿದ ವಿಶ್ವ ಪ್ರವಾದಿ ಮೊಹಮ್ಮದ್ (ಸ.ಅ) ರವರನ್ನು ನಿಂದನೆ ಮಾಡಿದವರ ವಿರುದ್ದ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಆದರೆ ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಮಾಡುವುದನ್ನ ಒಪ್ಪುವುದು ಸಾಧ್ಯವೇ ಇಲ್ಲ.ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…