ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದರು. ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ, ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು.
ರಾಷ್ಟೀಯ ಸ್ವಯಂಸೇವಕ ಸಂಘವು ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದೂ ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳುತ್ತಾ ಬರುತ್ತಿದೆ.
ಇದರ ಮುಂದುವರಿದ ಹಾದಿಯಾಗಿ ಬೆಂಗಳೂರಿನಲ್ಲಿ ನವೆಂಬರ್ 8 ಮತ್ತು 9ರಂದು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಾ.ಮೋಹನ್ ಭಾಗವತ್ ಮಾತನಾಡಲಿದ್ದಾರೆ. ಈ ಹಿನ್ನೆಲೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…