ಬೆಂಗಳೂರು: ಚಿತ್ರಮಂದಿರದ ಶೌಚಗೃಹಕ್ಕೆ ತೆರಳಿದ್ದ ಯುವತಿಯ ವಿಡಿಯೋ ಮಾಡಿದ್ದ ಇಬ್ಬರು 14 ವರ್ಷದ ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ವಿಜಯ್ ಅಭಿನಯದ ಭೀಮ ಚಿತ್ರದ ರಾತ್ರಿ ಪ್ರದರ್ಶನದ ವೇಳೆ ಈ ಘಟನೆ ನಡೆದಿದೆ. ಮಧ್ಯಂತರ ವಿರಾಮದ ವೇಳೆ ಶೌಚಗೃಹ ಬಳಸಲು ಬಂದ 23 ವರ್ಷದ ಯುವತಿ ವಾಶ್ರೂಮ್ ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋಗಳನ್ನು ರೆಕಾರ್ಡ್ ಮಾಡುವುದನ್ನು ಕಣ್ಣಾರೆ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಸಿನಿಮಾ ಮುಗಿದ ಮೇಲೆ ಚಿತ್ರಮಂದಿರದಿಂದ ಹೊರಬರುತ್ತಿದ್ದ ಪ್ರೇಕ್ಷಕರನ್ನು ಪರೀಕ್ಷಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಹಿಡಿದು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
23 ವರ್ಷದ ಸಂತ್ರಸ್ತೆ ತನ್ನ ಕುಟುಂಬದೊಂದಿಗೆ ಭೀಮ ಚಿತ್ರವನ್ನು ನೋಡಲು ರಾತ್ರಿ ಶೋಗೆ ಬಂದಿದ್ದಳು. ವಿರಾಮದ ವೇಳೆ ಶೌಚಗೃಹ ಬಳಸಿ ಹೊರಬಂದಾಗ ಇಬ್ಬರು ಹುಡುಗರು ಓಡಿಹೋಗುವುದನ್ನು ನೋಡಿದಳು. ತಕ್ಷಣ ಈ ವಿಷಯವನ್ನು ಥಿಯೇಟರ್ ಸಿಬ್ಬಂದಿಯ ಗಮನಕ್ಕೆ ತಂದರು. ನಂತರ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ (ERSS) ಸಂಖ್ಯೆ 112 ಗೆ ಕರೆ ಮಾಡಿ ದೂರು ನೀಡಿದ್ದರು. ಇಬ್ಬರೂ ಬಾಲಕರು ಜಯನಗರ 1ನೇ ಬ್ಲಾಕ್ ನಿವಾಸಿಗಳು. ವಾಶ್ ರೂಂನಲ್ಲಿ ಮಹಿಳೆಯರನ್ನು ಚಿತ್ರೀಕರಿಸಲು ಬಳಸಲಾಗಿದ್ದ ಮೊಬೈಲ್ ಒಂದನ್ನು ವಶಪಡಿಸಿಕೊಂಡು ಪರಿಶೀಲನೆಗೆ ಕಳುಹಿಸಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಕಳೆದ ಆರು ದಿನಗಳಲ್ಲಿ ಇದೇ ರೀತಿಯ ಎರಡನೇ ಘಟನೆಯಾಗಿದೆ. ಮಹಿಳೆಯರ ವಾಶ್ ರೂಂನಲ್ಲಿ ಮೊಬೈಲ್ ಇಟ್ಟಿದ್ದಕ್ಕಾಗಿ ಬಿಇಎಲ್ ರಸ್ತೆಯ ಥರ್ಡ್ ವೇವ್ ಕಾಫಿ ಉದ್ಯೋಗಿ 23 ವರ್ಷದ ಮನೋಜ್ ಎಂಬಾತನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…