ಬೆಂಗಳೂರು : ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕುಸಿದು ಬಿದ್ದು ಮಹಿಳೆ ಸಾವು – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕುಸಿದು ಬಿದ್ದು ಮಹಿಳೆ ಸಾವು – Vishwanews24

ಬೆಂಗಳೂರು: ಮಹಿಳೆಯೋರ್ವರು ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಬೆಂಗಳೂರಿನ ಬೈಯ್ಯಪ್ಪನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಮಂಗಳೂರು ಮೂಲದ 35 ವರ್ಷದ ವಿನಯ ಕುಮಾರಿ ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು ಸ್ಥಳೀಯ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದರು.ಕಳೆದು ಎರಡು ವರ್ಷಗಳಿಂದ ಜಿಮ್ ನಲ್ಲಿ ವರ್ಕ್ ಔಟ್ ಮಾಡ್ತಿದ್ದ ವಿನಯ ಕುಮಾರಿ ಬೆಳಗ್ಗೆ ವೇಳೆ ಜಿಮ್ ನಲ್ಲಿ ವರ್ಕ್ ಔಟ್ ಮಾಡಿ, ಕೆಲಸಕ್ಕೆ ತೆರಳುತ್ತಿದ್ದರು.

ಎಂದಿನಂತೆ ಸಾಮಾನ್ಯವಾಗಿ ಜಿಮ್​ ಬಾರ್​ ಮಾಡುತ್ತಿದ್ದಾಗ, ಇದ್ದಕ್ಕಿದ್ದಂತೆ ಅವರ ಅರಿವಿಗೂ ಬಾರದಂತೆ ಹಿಂದಕ್ಕೆ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ.

ಕೊಲ್ಲೂರು : ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ :  ಹೆಸರು ಬದಲಾಯಿಸುವಂತೆ ದೇವಾಲಯಕ್ಕೆ ವಿಎಚ್‌ಪಿ ಮನವಿ – Vishwanews24

Leave a Reply