ಬೆಂಗಳೂರು : ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅತುಲ್ ಪತ್ನಿ, ಎ1 ನಿಖಿತಾ ಸಿಂಘಾನಿಯ, ಆತುಲ್ ಅತ್ತೆ, ಎ2 ನಿಶಾ ಸಿಂಘಾನಿಯಾ, ಭಾಮೈದ ಎ3 ಅನುರಾಗ್ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂವರನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪತಿ ಆತ್ಮಹತ್ಯೆ ಬಳಿಕ ನಿಖಿತಾ ಪರಾರಿಯಾಗಿದ್ದರು. ಹುಡುಕಾಟ ಆರಂಭಿಸಿದ್ದ ಮಾರತ್ತಹಳ್ಳಿ ಪೊಲೀಸರು ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ಏನಿದು ಪ್ರಕರಣ
ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ (34 ವರ್ಷ) ಡೆತ್ನೋಟ್ ಬರೆದಿಟ್ಟು ಡಿಸೆಂಬರ್ 9ರಂದು ಬೆಂಗಳೂರಿನ ಮಂಜುನಾಥ ಲೇಔಟ್ನ ಪ್ಲಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನಗೆ ಪತ್ನಿ ಮತ್ತು ಆಕೆಯ ಸಂಬಂಧಿಕರು ನೀಡಿರುವ ಕಿರುಕುಳದ ಬಗ್ಗೆ 90 ನಿಮಿಷಗಳ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹರಿಬಿಟ್ಟಿದ್ದಾರೆ. ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತುಲ್ ಸುಭಾಷ ಆತ್ಮಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಅಲ್ಲದೇ ಪ್ರಕರಣ ಸುಪ್ರೀಂ ಕೋರ್ಟ್ನಲ್ಲೂ ಪ್ರಸ್ತಾಪವಾಗಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…