Featured

ಬೆಂಗಳೂರು : ಡಿವೈಡರ್ ಹಾರಿ ಬಸ್ ಗೆ ಢಿಕ್ಕಿ ಹೊಡೆದ ಕಾರು ; ಮೂವರು ಸ್ಥಳದಲ್ಲೇ  ಮೃತ್ಯು – vishwanews24

ಬೆಂಗಳೂರು : ಭೀಕರ ರಸ್ತೆ ಅಪಘಾತ – ಡಿವೈಡರ್ ಹಾರಿ ಬಸ್‍ ಗೆ ಢಿಕ್ಕಿ ಹೊಡೆದ ಕಾರು ; ಮೂವರು ಸ್ಥಳದಲ್ಲೇ  ಮೃತ್ಯು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ ನಿವಾಸಿಗಳಾದ ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ಗುರುತಿಸಲಾಗಿದೆ.

ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ KA 50 MA 0789 ಸಂಖ್ಯೆಯ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಅಪಘಾತ ಸ್ಥಳದಿಂದ ಕಾರನ್ನು ಹೊರತೆಗೆಯುವ ಕಾರ್ಯ ಪೂರ್ಣಗೊಂಡಿದ್ದು, ಸಂಚಾರ ದಟ್ಟಣೆ ನಿಧಾನವಾಗಿ ಕಡಿಮೆಯಾಗುತ್ತಿದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago