ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್ ಒಂದದಲ್ಲಿ ನಡೆದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೈಕೆದಾರರನ್ನು ಪೊಲೀಸರು ಬಂಧಿಸಿದ್ದಾರೆ. ಪುಟಾಣಿ ಮಕ್ಕಳ ಯೋಗಕ್ಷೇಮ ನೋಡಿಕೊಳ್ಳಬೇಕಾದ ಇವರುಗಳು, ಚಿಕ್ಕಮಕ್ಕಳಿಗೆ ಹಿಂಸೆ ನೀಡುವ ವಿಡಿಯೋ ವೈರಲ್ ಆಗಿತ್ತು.
ಡೇ ಕೇರ್ ನೆಪದಲ್ಲಿ ಚಿಕ್ಕಮಕ್ಕಳನ್ನು ಬಾತ್ ರೂಂನಲ್ಲಿ ಕೂಡಿ ಹಾಕಿರುವುದು ಮಾತ್ರವಲ್ಲದೆ, ವಾಷಿಂಗ್ ಮಷೀನ್ ಒಳಗಡೆ ಹಾಕಿದ್ದ ವಿಡಿಯೋ ವೈರಲ್ ಆದಾಗ ಘಟನೆ ಬೆಳಕಿಗೆ ಬಂದಿತ್ತು.
ಹಗಲು ಪಾಲನಾ ಕೇಂದ್ರದ ಇಬ್ಬರು ಸಿಬ್ಬಂದಿಗಳಾದ ವಿಜಯಲಕ್ಷ್ಮೀ ಮತ್ತು ಮಂಜುಳಾರನ್ನು ಬಂಧಿಸಲಾಗಿದೆ.
ಈ ಇಬ್ಬರ ವಿರುದ್ಧ ಪೊಲೀಸರಿಗೆ ಸಾಕಷ್ಟು ಸಾಕ್ಷಿಗಳು ದೊರೆತಿದೆ. ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ. ಘಟನೆಯಲ್ಲಿ ಐಟಿ ಸಂಸ್ಥೆಯ ಪಾತ್ರ ಮತ್ತು ಲಿಟಲ್ ಸ್ಕಾಲರ್ ಎಂಬ ಏಜೆನ್ಸಿಯ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಬೇಬಿ ಡೇ ಕೇರ್ ಸೆಂಟರ್‌ನಲ್ಲಿ ಗಲಾಟೆ ಮಾಡುವ ಮಕ್ಕಳನ್ನು ವಾಷಿಂಗ್ ಮೆಷಿನ್‌ನಲ್ಲಿ ಹಾಕಿ ದೈಹಿಕ ಹಿಂಸೆ ನೀಡಿದ್ದ ಆಘಾತಕಾರಿ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಕ್ಕಳ ಪೋಷಿಸುವ ಹಗಲು ಪಾಲನಾ ಕೇಂದ್ರಗಳ (ಡೇ ಕೇರ್ ಸೆಂಟರ್) ಮೇಲ್ವಿಚಾರಣೆಗೆ ವಿಶೇಷ ತಂಡ ರಚಿಸುವಂತೆ ಒತ್ತಾಯಿಸಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮುಖ್ಯಮಂತ್ರಿಗೆ ಮನವಿ ಮಾಡಿದೆ.
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…