ರಾಜ್ಯ ನ್ಯೂಸ್

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ

ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್ ಒಂದದಲ್ಲಿ ನಡೆದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೈಕೆದಾರರನ್ನು ಪೊಲೀಸರು ಬಂಧಿಸಿದ್ದಾರೆ. ಪುಟಾಣಿ ಮಕ್ಕಳ ಯೋಗಕ್ಷೇಮ ನೋಡಿಕೊಳ್ಳಬೇಕಾದ ಇವರುಗಳು, ಚಿಕ್ಕಮಕ್ಕಳಿಗೆ ಹಿಂಸೆ ನೀಡುವ ವಿಡಿಯೋ ವೈರಲ್ ಆಗಿತ್ತು.

ಡೇ ಕೇರ್ ನೆಪದಲ್ಲಿ ಚಿಕ್ಕಮಕ್ಕಳನ್ನು ಬಾತ್ ರೂಂನಲ್ಲಿ ಕೂಡಿ ಹಾಕಿರುವುದು ಮಾತ್ರವಲ್ಲದೆ, ವಾಷಿಂಗ್ ಮಷೀನ್ ಒಳಗಡೆ ಹಾಕಿದ್ದ ವಿಡಿಯೋ ವೈರಲ್ ಆದಾಗ ಘಟನೆ ಬೆಳಕಿಗೆ ಬಂದಿತ್ತು.

ಹಗಲು ಪಾಲನಾ ಕೇಂದ್ರದ ಇಬ್ಬರು ಸಿಬ್ಬಂದಿಗಳಾದ ವಿಜಯಲಕ್ಷ್ಮೀ ಮತ್ತು ಮಂಜುಳಾರನ್ನು ಬಂಧಿಸಲಾಗಿದೆ.

ಈ ಇಬ್ಬರ ವಿರುದ್ಧ ಪೊಲೀಸರಿಗೆ ಸಾಕಷ್ಟು ಸಾಕ್ಷಿಗಳು ದೊರೆತಿದೆ. ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ. ಘಟನೆಯಲ್ಲಿ ಐಟಿ ಸಂಸ್ಥೆಯ ಪಾತ್ರ ಮತ್ತು ಲಿಟಲ್ ಸ್ಕಾಲರ್ ಎಂಬ ಏಜೆನ್ಸಿಯ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಬೇಬಿ ಡೇ ಕೇರ್ ಸೆಂಟರ್‌ನಲ್ಲಿ ಗಲಾಟೆ ಮಾಡುವ ಮಕ್ಕಳನ್ನು ವಾಷಿಂಗ್ ಮೆಷಿನ್‌ನಲ್ಲಿ ಹಾಕಿ ದೈಹಿಕ ಹಿಂಸೆ ನೀಡಿದ್ದ ಆಘಾತಕಾರಿ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಕ್ಕಳ ಪೋಷಿಸುವ ಹಗಲು ಪಾಲನಾ ಕೇಂದ್ರಗಳ (ಡೇ ಕೇರ್ ಸೆಂಟರ್) ಮೇಲ್ವಿಚಾರಣೆಗೆ ವಿಶೇಷ ತಂಡ ರಚಿಸುವಂತೆ ಒತ್ತಾಯಿಸಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮುಖ್ಯಮಂತ್ರಿಗೆ ಮನವಿ ಮಾಡಿದೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

3 hours ago