ಬೆಂಗಳೂರು: ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.
ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದರು. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಈ ಗುಂಪಿನಲ್ಲಿ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ಧಾಂತ್ ಹೋಟೆಲ್‍ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಸಿದ್ಧಾಂತ್ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಮಗ ಆಗಿದ್ದು, ಶ್ರದ್ಧಾ ಕಪೂರ್ ಸಹೋದರ ಆಗಿದ್ದಾರೆ.
ಅಖೀಲ್ ಸೋನಿ, ಅಜೋದ್ ಸಿಂಗ್ ಪಂಜಾಬ್, ಅಖೀಲ್, ಅನಿ, ದರ್ಶನ್ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳೇಲ್ಲರು ಟೆಕ್ಕಿಗಳಾಗಿದ್ದು, ರಾತ್ರಿ ಪಾರ್ಟಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ ಕೊಟ್ಟಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…