Featured

ಬೆಂಗಳೂರು ಡ್ರಗ್ಸ್ ಪಾರ್ಟಿ : ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ – Vishwanews24

ಬೆಂಗಳೂರು ಡ್ರಗ್ ಪಾರ್ಟಿ : ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ – Vishwanews24

ಬೆಂಗಳೂರು: ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದರು. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಈ ಗುಂಪಿನಲ್ಲಿ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ಧಾಂತ್ ಹೋಟೆಲ್‍ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಸಿದ್ಧಾಂತ್ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಮಗ ಆಗಿದ್ದು, ಶ್ರದ್ಧಾ ಕಪೂರ್ ಸಹೋದರ ಆಗಿದ್ದಾರೆ.

ಅಖೀಲ್ ಸೋನಿ, ಅಜೋದ್ ಸಿಂಗ್ ಪಂಜಾಬ್, ಅಖೀಲ್, ಅನಿ, ದರ್ಶನ್ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳೇಲ್ಲರು ಟೆಕ್ಕಿಗಳಾಗಿದ್ದು, ರಾತ್ರಿ ಪಾರ್ಟಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ ಕೊಟ್ಟಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

11 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

12 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

12 hours ago