ಬೆಂಗಳೂರು: ತಂದೆ-ತಾಯಿಯ ಹತ್ಯೆಗೈದ ಮಗ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕೌಟುಂಬಿಕ ಕಲಹ ; ತಂದೆ-ತಾಯಿಯ ಹತ್ಯೆಗೈದ ಮಗ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ತಂದೆ, ತಾಯಿಯನ್ನು ಹತ್ಯೆಗೈದ ಆರೋಪದ ಮೇಲೆ ಮಗನನ್ನು ಹೆಚ್​ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಂದೆ ನವೀನ್ ಚಂದ್ರ ಭಟ್ (60) ಹಾಗೂ ತಾಯಿ ಡಾ.ಶ್ಯಾಮಲಾ ಭಟ್ (55) ಅವರನ್ನು ಕೊಲೆಯಾದವರು. ಇವರನ್ನು ಹತ್ಯೆ ಮಾಡಿದ ಆರೋಪದಡಿ ಟೆಕ್ಕಿ ರೋಹನ್ ಚಂದ್ರ ಭಟ್ (33) ಎಂಬವನನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೆಚ್​ಎಎಲ್​ನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್​​ಮೆಂಟ್​​​ನಲ್ಲಿ ವಾಸವಾಗಿದ್ದ ಪ್ಲ್ಯಾಟ್​​ನಲ್ಲಿ ಕೊಲೆ ನಡೆದಿದೆ. ನವೀನ್ ಚಂದ್ರ ಅವರು ನೌಕಾ ಸೇನೆಯ ನಿವೃತ್ತ ಕ್ಯಾಪ್ಟನ್ ಆಗಿದ್ದರೆ, ಶ್ಯಾಮಲಾ ಅವರು ದಂತ ವೈದ್ಯೆಯಾಗಿದ್ದರು.

 ಇದನ್ನೂ ಓದಿ:

ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ – vishwanews24

 

ಕೌಟುಂಬಿಕ ಕಲಹದ ಕಾರಣ ಬುಧವಾರ ಬೆಳಗ್ಗೆ 7.30ರ ಸುಮಾರಿಗೆ ರೋಹನ್ ತನ್ನ ಪೋಷಕರಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನೂ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ವೈದ್ಯೆ ಡಾ.ಮಾಧವಿ ನಾಯರ್ ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರ ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತರ ಮಗಳು ಯುಎಸ್ ಎನಲ್ಲಿದ್ದು, ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಕೃತ್ಯ ಎಸಗಿರುವ ಆರೋಪಿಯನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

 ಇದನ್ನೂ ಓದಿ:

ಮಣಿಪಾಲ : ಮಾದಕ ವಸ್ತು ಮಾರಾಟ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – vishwanews24

 

Leave a Reply