ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ತಂದೆ, ತಾಯಿಯನ್ನು ಹತ್ಯೆಗೈದ ಆರೋಪದ ಮೇಲೆ ಮಗನನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಂದೆ ನವೀನ್ ಚಂದ್ರ ಭಟ್ (60) ಹಾಗೂ ತಾಯಿ ಡಾ.ಶ್ಯಾಮಲಾ ಭಟ್ (55) ಅವರನ್ನು ಕೊಲೆಯಾದವರು. ಇವರನ್ನು ಹತ್ಯೆ ಮಾಡಿದ ಆರೋಪದಡಿ ಟೆಕ್ಕಿ ರೋಹನ್ ಚಂದ್ರ ಭಟ್ (33) ಎಂಬವನನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೆಚ್ಎಎಲ್ನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಪ್ಲ್ಯಾಟ್ನಲ್ಲಿ ಕೊಲೆ ನಡೆದಿದೆ. ನವೀನ್ ಚಂದ್ರ ಅವರು ನೌಕಾ ಸೇನೆಯ ನಿವೃತ್ತ ಕ್ಯಾಪ್ಟನ್ ಆಗಿದ್ದರೆ, ಶ್ಯಾಮಲಾ ಅವರು ದಂತ ವೈದ್ಯೆಯಾಗಿದ್ದರು.
ಇದನ್ನೂ ಓದಿ:
ಕೌಟುಂಬಿಕ ಕಲಹದ ಕಾರಣ ಬುಧವಾರ ಬೆಳಗ್ಗೆ 7.30ರ ಸುಮಾರಿಗೆ ರೋಹನ್ ತನ್ನ ಪೋಷಕರಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನೂ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ವೈದ್ಯೆ ಡಾ.ಮಾಧವಿ ನಾಯರ್ ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರ ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತರ ಮಗಳು ಯುಎಸ್ ಎನಲ್ಲಿದ್ದು, ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಕೃತ್ಯ ಎಸಗಿರುವ ಆರೋಪಿಯನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…