Featured

ಬೆಂಗಳೂರು ತಲುಪಿದ ಕೋವಿಡ್-19 ಲಸಿಕೆ -Vishwanews24

ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ಮಹಾನಗರ ತಲುಪಿದ ಕೋವಿಡ್-19 ಲಸಿಕೆ –Vishwanews24

ನವದೆಹಲಿ: ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ ಹೊರಟ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಬೆಂಗಳೂರು, ದೆಹಲಿ ಸೇರಿದಂತೆ ದೇಶದ ವಿವಿಧ ಮಹಾನಗರಗಳಿಗೆ ತಲುಪಿದೆ.

ಇಂದು ಬೆಳಗ್ಗೆ 8 ಗಂಟೆಗೆ ಪುಣೆ ವಿಮಾನ ನಿಲ್ದಾಣದಿಂದ ಹೊರಟ ಸ್ಪೈಸ್ ಜೆಟ್ ವಿಮಾನ ಲಸಿಕೆಯನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ 10 ಗಂಟೆ ಹೊತ್ತಿಗೆ ಬಂದಿಳಿಯಿತು. ಸೆರಂ ಇನ್ಸ್ ಟಿಟ್ಯೂಟ್ ಪುಣೆ ವಿಮಾನ ನಿಲ್ದಾಣದಿಂದ 15 ಕಿಲೋ ಮೀಟರ್ ದೂರದಲ್ಲಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ 11.45ರ ಸುಮಾರಿಗೆ ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡುವ ಬ್ರಹ್ಮಾಸ್ತ್ರ ಲಸಿಕೆ ಬಂದಿಳಿದಿದ್ದು, ಅಲ್ಲಿಂದ ವ್ಯಾಕ್ಸಿನ್ ಕೇಂದ್ರಗಳಿಗೆ ರವಾನೆಯಾಗಲಿದೆ.

ಇಂದು 56.5 ಲಕ್ಷ ಡೋಸ್ ಕೋವಿಡ್-19 ಲಸಿಕೆಯನ್ನು ಪುಣೆಯಿಂದ 13 ಮಹಾನಗರಗಳಿಗೆ ತಲುಪಿಸಲು ನಾಲ್ಕು ವಿಮಾನ ಯಾನ ಸಂಸ್ಥೆಗಳ 9 ವಿಮಾನಗಳಲ್ಲಿ ಸಾಗಿಸಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಮೂರು ತಾಪಮಾನ ನಿಯಂತ್ರಣ ಟ್ರಕ್ ಗಳು ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಸೆರಂ ಇನ್ಸ್ ಟಿಟ್ಯೂಟ್ ನಿಂದ ವಿಮಾನ ನಿಲ್ದಾಣ ಕಡೆಗೆ ಹೊರಟಿತು. ಲಸಿಕೆಯನ್ನು ವಾಹನಕ್ಕೆ ಹಾಕಿ ಹೊರಡುವ ಮೊದಲು ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಲಾಯಿತು.

ಕೋವಿಶೀಲ್ಡ್ ಲಸಿಕೆಯನ್ನು ಆಕ್ಸ್ ಫರ್ಡ್ ವಿಶ್ವ ವಿದ್ಯಾಲಯ ಮತ್ತು ಬ್ರಿಟನ್-ಸ್ವೀಡನ್ ಮೂಲದ ಕಂಪೆನಿ ಅಸ್ಟ್ರಾಝೆನೆಕಾ ಅಭಿವೃದ್ಧಿಪಡಿಸಿದ್ದು ಸೆರಂ ಇನ್ಸ್ ಟಿಟ್ಯೂಟ್ ಉತ್ಪಾದನೆ ಮಾಡಿದೆ.

ಗುಜರಾತ್ ನ ಅಹ್ಮದಾಬಾದ್ ನ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಹ ಕೆಲ ಹೊತ್ತಿನ ಮೊದಲು ಕೋವಿಡ್ ಲಸಿಕೆ ಬಾಕ್ಸ್ ಗಳಲ್ಲಿ ಬಂದಿಳಿಯಿತು.

ಇದೇ 16ರಿಂದ ಕೋವಿಡ್-19 ಲಸಿಕಾ ಅಭಿಯಾನ ದೇಶಾದ್ಯಂತ ಆರಂಭವಾಗುತ್ತಿದ್ದು, ಆರಂಭದಲ್ಲಿ ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಗುತ್ತದೆ.

http://ನಗರ ನಕ್ಸಲರು ರೈತರ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ : ಶೋಭಾ ಕರಂದ್ಲಾಜೆ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

16 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

16 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

16 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

16 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

20 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

20 hours ago