ಬೆಂಗಳೂರು ದಕ್ಷಿಣ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕಿಯರಿಂದ ‘ಅಲ್ಲಾಡ್ಸು-ಅಲ್ಲಾಡ್ಸು’ ಡ್ಯಾನ್ಸ್ : ಶಿಕ್ಷಣ ಸಚಿವರಿಂದ ಶಾಲೆಗೆ ನೋಟೀಸ್ -Vishwanews24

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ‘ಅಲ್ಲಾಡ್ಸು-ಅಲ್ಲಾಡ್ಸು’ ಹಾಡೊಂದಕ್ಕೆ ಶಿಕ್ಷಕಿಯರ ತಂಡ ವೇದಿಕೆಯಲ್ಲಿ ಹೆಜ್ಜೆ ಹಾಕಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವೈರಲ್ ಆಗಿದ್ದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಘಟನೆಯ ಕುರಿತು ಶಾಲೆಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಸರ್ಕಾರಿ ಶಾಲೆಯ ವೇದಿಕೆಯಲ್ಲಿ ಶಿಕ್ಷಕಿಯರು ಡಾನ್ಸ್ ಹೆಜ್ಜೆ ಹಾಕಿರುವುದನ್ನು ‘ಅಸಭ್ಯ’ ನೃತ್ಯ ಎಂದು ಪರಿಗಣಿಸಿ ಈ ನೋಟೀಸ್ ನೀಡಲಾಗಿದೆ.

“ಶಿಕ್ಷಕ ವೃತ್ತಿಗೆ ತರವಲ್ಲದ ರೀತಿಯಲ್ಲಿ ನೃತ್ಯ ಮಾಡಿರುವ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಾಂಜನೇಯ ರಸ್ತೆ ಹನುಮಂತನಗರ ಎಂದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ರೀತಿಯ ನೃತ್ಯಗಳು ಶೈಕ್ಷಣಿಕ ಮಾನಸಿಕ ಹಾಗೂ ಬೌದ್ದಿಕತೆ ಮೇಲೆ ದುಷ್ಪರಿಣಾಮ ಬೀರುತ್ತದೆ.

“ಜವಬ್ದಾರಿಯುತ ಮತ್ತು ಸಮಾಜದಲ್ಲಿ ಗೌರವಯುತ ಹುದ್ದೆಯಲ್ಲಿರುವ ಶಿಕ್ಷಕರು ಈ ರೀತಿ ವರ್ತಿಸಿರುವುದು, ಹಾಗೂ ಅನುಮತಿ ನೀಡಿರುವುದು ನಿಯಮಕ್ಕೆ ವಿರುದ್ದವಾಗಿದೆ. ಇದು ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಸರಿಯಾದ ಕ್ರಮವಲ್ಲ. ಕರ್ತವ್ಯ ಲೋಪ ಹಾಗೂ ಇಲಾಖೆಯ ಗೌರವಕ್ಕೆ ಧಕ್ಕೆ ತಂದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ನಿಮ್ಮ ಮೇಲೆ ಶಿಸ್ತು ಕ್ರಮ ಜರಗಿಸಬಾರದೇಕೆ ಎಂದು ಲಿಖಿತ ಸಮಜಾಯಿಷಿ ನೀಡಲು ಸೂಚಿಸಿದೆ” ಎಂದು ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಪಕ್ಕೆಲುಬು ಉಚ್ಚರಿಸುವಂತೆ ಹೇಳಿ ಥಳಿಸಿದ ವಿಡಿಯೋ ಒಂದು ವೈರಲ್ ಆಗಿತ್ತು. ಶಿಕ್ಷಕರ ನಡೆಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಶಿಕ್ಷಕರನ್ನು ಸಚಿವ ಸುರೇಶ್ ಕುಮಾರ್ ಸೂಚನೆಯಂತೆ ಅಮಾನತು ಮಾಡಲಾಗಿತ್ತು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago