ಬೆಂಗಳೂರು : ದಕ್ಷಿಣ ಭಾರತದ ಮೊಟ್ಟಮೊದಲ ವಂದೆ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಇಂದು ಪ್ರಧಾನಿ ಮೋದಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಫ್ಲಾಟ್ ಫಾರ್ಮ್ ನಂ.7ಅಲ್ಲಿ ಹಸಿರು ನಿಶಾನೆ ನೀಡಿದರು.
ಮೈಸೂರು-ಚೆನ್ನೈ-ಬೆಂಗಳೂರು ಮಾರ್ಗವಾಗಿ ಹಾಗೂ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಸಾಗಲಿದೆ.
ಮೋದಿ ಆಗಮನದ ಹಿನ್ನಲೆಯಲ್ಲಿ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಕೂಡ ಆಗಮಿಸಿದ್ದರು. ಮೋದಿ ಚಾಲನೆ ನೀಡಿದ ಬಳಿಕ ರೈಲು ಚೆನ್ನೈ ಕಡೆ ಪ್ರಯಾಣ ಬೆಳೆಸಿತು. ಮೊದಲಿಗೆ ಟ್ರೇನ್-18 ಎಂದು ನಾಮಕರಣ ಮಾಡಲಾಗಿತ್ತು. ನಂತರ ವಂದೇ ಭಾರತ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ,. ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ನಂತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಕಾಸರಗೋಡು: ಕುಂದಾಪುರ ರೈಲ್ವೇ ಹಳಿಯಲ್ಲಿ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಪತ್ತೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…