Featured

ಬೆಂಗಳೂರು: ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ;  ಬ್ಯಾಂಕ್​ ಮ್ಯಾನೇಜರ್ ವಿರುದ್ಧ FIR ದಾಖಲು- vishwanews24

ಬೆಂಗಳೂರು:  ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ;  ಬ್ಯಾಂಕ್​ಮ್ಯಾನೇಜರ್ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್​ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

3 ಕೋಟಿ ರೂ.ಗೂ ಹೆಚ್ಚು ವಂಚನೆ
ಮಲ್ಲೇಶ್ವರಂನ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ ಕೋಟಿ ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ ಒಟ್ಟು 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.

ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿದ ಆರೋಪವಿದ್ದು, ಬ್ಯಾಂಕ್ ಕೆಲಸಕ್ಕೆ ಅಗತ್ಯವೆಂದು ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಗ್ರಾಹಕರಿಗೆ ತಿಳಿಯದೇ ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಗ್ರಾಹಕರು ಎಚ್ಚರದಿಂದಿರುವಂತೆ ಸೂಚನೆ
ಈಗಾಗಲೇ ಕೆನರಾ ಬ್ಯಾಂಕ್ 41 ಖಾತೆಗಳನ್ನು ಫ್ರೀಜ್ ಮಾಡಿದ್ದು, ಯಾವುದೇ ಚಿನ್ನವಿಲ್ಲದೇ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಯ ನಂತರ ತಮ್ಮ ಖಾತೆಗಳಲ್ಲಿ ಯಾವುದೇ ಅನುಮಾನಾಸ್ಪದ ಲೋನ್ ಇದೆಯೇ ಎಂಬುದನ್ನು ತಕ್ಷಣ ಪರಿಶೀಲಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago