Featured

ಬೆಂಗಳೂರು : ನವೆಂಬರ್‌ 18ರಿಂದ ರಾತ್ರಿ 11.30ರವರೆಗೆ ಮೆಟ್ರೋ ಸಂಚಾರ , ತಡರಾತ್ರಿ ಕೆಲಸ ಮುಗಿಸಿ ಹೊರಡುವವರಿಗೆ ಅನುಕೂಲ – Vishwanews24

ಬೆಂಗಳೂರು : ನವೆಂಬರ್‌ 18ರಿಂದ ರಾತ್ರಿ 11.30ರವರೆಗೆ ಮೆಟ್ರೋ ಸಂಚಾರ , ತಡರಾತ್ರಿ ಕೆಲಸ ಮುಗಿಸಿ ಹೊರಡುವವರಿಗೆ ಅನುಕೂಲ – Vishwanews24

ಬೆಂಗಳೂರು : ಗುರುವಾರದಿಂದ (ನ.18)ರಿಂದ ಮಹಾನಗರದಲ್ಲಿ ಕ್ಷಿಪ್ರ ಸಾರಿಗೆ ಒದಗಿಸುವ ಮೆಟ್ರೋ ರೈಲು ಸೇವೆ ಮಧ್ಯರಾತ್ರಿವರೆಗೆ ಸಿಗಲಿದೆ.

ವಾರದ ಎಲ್ಲಾ ದಿನಗಳಲ್ಲಿ ಕೊನೆಯ ಮೆಟ್ರೋ ರೈಲು ಸೇವೆ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ಟರ್ಮಿನಲ್‌ ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಹೊರಡಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು ದಿಕ್ಕುಗಳ ಕೊನೆಯ ಮೆಟ್ರೋ ರಾತ್ರಿ 11.30ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ರೈಲ್ವೇ ಸೇವೆ ಆರಂಭವಾಗಲಿದೆ. ಭಾನುವಾರ ಮಾತ್ರ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಮೆಟ್ರೊ ಸೇವೆ ವಿಸ್ತರಿಸಿರುವುದರಿಂದ ಉದ್ಯೋಗಿಗಳು, ವರ್ತಕರು, ಗ್ರಾಹಕರು ಪ್ರಯಾಣಕ್ಕಾಗಿ ವೈಯಕ್ತಿಕ ವಾಹನ, ಬಸ್‌, ಟ್ಯಾಕ್ಸಿ ಅಥವಾ ಆಟೋಗಳನ್ನು ಅವಲಂಭಿಸುವ ಸ್ಥಿತಿ ತಪ್ಪಲಿದೆ.

ಮುಂಜಾನೆ 5 ಗಂಟೆಯಿಂದ ರಾತ್ರಿ 12ರವರೆಗೆ ಮೆಟ್ರೋ ರೈಲು ಕಾರ್ಯಾಚರಣೆಗೊಳಿಸಬೇಕೆಂಬುದು ಪ್ರಯಾಣಿಕರ ಒತ್ತಾಯವಾಗಿತ್ತು. ಸದ್ಯ 11 ಗಂಟೆವರೆಗೆ ರೈಲ್ವೇ ಸೇವೆ ವಿಸ್ತರಿಸಿರುವುದರಿಂದ ಮೆಜೆಸ್ಟಿಕ್‌, ಚಿಕ್ಕಪೇಟೆ, ಪೀಣ್ಯ, ಎಂ.ಜಿ.ರಸ್ತೆ, ಜಯನಗರ, ರಾಜಾಜಿನಗರ, ಮಲ್ಲೇಶ್ವರ ಸೇರಿ ಇತರೆ ಪ್ರದೇಶಗಳಲ್ಲಿನ ಅಂಗಡಿ-ಮುಂಗಟ್ಟುಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ರಾತ್ರಿ ವೇಳೆ ರೈಲು ಸೇವೆ ಸಿಗುವಂತಾಗಿದೆ.

ಲಾಕ್‌ಡೌನ್‌ ನಂತರ ಮೆಟ್ರೊ ಸೇವೆ ಆರಂಭವಾದಾಗ ಬೆಳಗ್ಗೆ 7 ಗಂಟೆಯಿಂದ ಸಂಜೆ 8ರ ತನಕ ಸಂಚಾರವಿತ್ತು. ಈ ಸಮಯದಲ್ಲಿ ಪ್ರತಿದಿನ ಪ್ರಯಾಣಿಕರ ಸಂಖ್ಯೆ ಸರಾಸರಿ ಒಂದು ಲಕ್ಷ ಇತ್ತು. ನಂತರ ಸಮಯವನ್ನು ಬೆಳಗ್ಗೆ 5 ರಿಂದ ಸಂಜೆ 10ರವರೆಗೆ ವಿಸ್ತರಿಸಲಾಯಿತು. ಇದರಿಂದ ಪ್ರಯಾಣಿಕರ ಸಂಖ್ಯೆ ಕೂಡ ಅಧಿಕವಾಯಿತು. ಪ್ರಸ್ತುತ ಪ್ರತಿದಿನ ಸರಾಸರಿ 2.5 ಲಕ್ಷ ಜನರು ಸಂಚಾರ ಮಾಡುತ್ತಿದ್ದಾರೆ. ಅವಧಿಯನ್ನು ಮಧ್ಯರಾತ್ರಿವರೆಗೆ ವಿಸ್ತರಿಸಿದರೆ ಪ್ರಯಾಣಿಕರ ಸಂಖ್ಯೆ ಕೂಡ ಅಧಿಕವಾಗಲಿದ್ದು, ಆದಾಯ ಕೂಡ ಹೆಚ್ಚಲಿದೆ. ಕೋವಿಡ್‌ ಪೂರ್ವದಲ್ಲಿ ಪ್ರತಿದಿನ ಸರಾಸರಿ 4 ಲಕ್ಷಕ್ಕೂ ಅಧಿಕ ಜನರು ಮೆಟ್ರೊ ಸೇವೆ ಬಳಸುತ್ತಿದ್ದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

14 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

15 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

15 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

15 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago