ಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ನಿರ್ವಾಹಕ ಸಜೀವ ದಹನವಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಬಸ್ ಡಿಪೋ 31ಕ್ಕೆ ಸೇರಿದ್ದಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.
ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ ದಲ್ಲಿ ಚಾಲಕ ಹಾಗೂ ನಿರ್ವಾಹಕ ಬಸ್‍ನಲ್ಲಿ ಮಲಗಿದ್ದರು. ಮುತ್ತಯ್ಯ ಸ್ವಾಮಿ ಅವರು ಬಸ್ಸಿನ ಸಿಟ್‍ನಲ್ಲಿಯೇ ಮಲಗಿದ್ದರು. ಈ ವೇಳೆ ಬಸ್ಸಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಮುತ್ತಯ್ಯ ಅವರು ಮಲಗಿದ್ದಲ್ಲೇ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಇತ್ತ ಮುಂಜಾನೆ ಚಾಲಕ ಎದ್ದು ಶೌಚಕ್ಕೆ ಹೋದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಗದಗ ಜಿಲ್ಲೆಯ ಹಾಲೂರ ಗ್ರಾಮದ ಮುತ್ತಯ್ಯ ಸ್ವಾಮಿ, ಕಳೆದ ಹಲವು ವರ್ಷಗಳಿಂದ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಬಿಎಂಟಿಸಿಯ 31 ರ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…