ಬೆಂಗಳೂರು : ನಿಗೂಢ ಸ್ಫೋಟ | ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24
ಬೆಂಗಳೂರು : ನಿಗೂಢ ಸ್ಫೋಟ | ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು: ನಗರದ ಆಡಗೊಡಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಿದ್ದರಾಮಯ್ಯ ಅವರು ಸ್ಪೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಮೇಲ್ನೋಟಕ್ಕೆ ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗಿದೆ. ಕಸ್ತೂರಮ್ಮ ಎಂಬುವರ ಮನೇಲಿ ಈ ಸ್ಫೋಟ ಸಂಭವಿಸಿದೆ. ವರಾಂಡ ರೀತಿಯ ಮನೆ ಆಗಿದ್ದರಿಂದ ಎಲ್ಲಾ ಮನೆಗಳು ಬಿದ್ದಿವೆ. ಹಾನಿಯಾದ ಮನೆ ರಿಪೇರಿಗೆ ಸೂಚನೆ ನೀಡಲಾಗಿದೆ ಎಂದರು.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮುಬಾರಕ್ ಎಂಬ ಹುಡುಗ ಸಾವನ್ನಪ್ಪಿದ್ದಾನೆ. 9 ಜನರಿಗೆ ಗಾಯಗಳಾಗಿವೆ. ಕಸ್ತೂರಮ್ಮಗೆ ಜಾಸ್ತಿ ಸುಟ್ಟ ಗಾಯಗಳಾಗಿದ್ದು, ಆಕೆಯ ಚಿಕಿತ್ಸೆಯನ್ನು ಸರ್ಕಾರ ಭರಿಸುತ್ತದೆ. ಪಕ್ಕದ ಮನೆಯವರ ಕಟ್ಟಡಗಳಿಗೂ ಹಾನಿಯಾಗಿದೆ. ಇದರ ಬಗ್ಗೆಯೂ ಗಮನಹರಿಸಲಾಗುತ್ತದೆ ಎಂದರು.
