ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆಯ ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್‌ನಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಉತ್ತರ ಪ್ರದೇಶ ಮೂಲದ ಉದಯ್ ಬಾನು (40) ಹಾಗೂ ಬಿಹಾರ ಮೂಲದ ರೋಶನ್ (23) ಎಂದು ಗುರುತಿಸಲಾಗಿದೆ.
ಸತೀಶ್ ಎನ್ನುವವರಿಗೆ ಸೇರಿದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿರ್ಮಾಣ ಹಂತದಲ್ಲಿದ್ದ ಬಿಲ್ಡಿಂಗ್‌ನಲ್ಲಿ ವುಡ್ ವರ್ಕ್ಸ್ ಮಾಡಲಾಗಿತ್ತು. ಈ ವೇಳೆ ಕೆಲಸಗಾರರ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಬಿದ್ದು, ಧಗಧಗನೆ ಹೊತ್ತಿ ಉರಿದ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ.
ಕಟ್ಟಡದಲ್ಲಿ ಒಟ್ಟು ಆರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನುಳಿದ ಇಬ್ಬರು ಕಾರ್ಮಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದು, ಸದ್ಯ ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…