Featured

ಬೆಂಗಳೂರು: ನೈಟ್ ಕರ್ಪ್ಯೂ : ಹೊಸ ವರ್ಷಾಚರಣೆಗೆ ಬ್ರೇಕ್​, ರೂಲ್ಸ್ ಬ್ರೇಕ್ ಮಾಡಿದ್ರೆ ಕೇಸ್ : ಪೊಲೀಸ್​ ಆಯುಕ್ತ ಕಮಲ್ ಪಂತ್ ಎಚ್ಚರಿಕೆ -Vishwanews24

ಬೆಂಗಳೂರು: ನೈಟ್ ಕರ್ಪ್ಯೂ : ಹೊಸ ವರ್ಷಾಚರಣೆಗೆ ಬ್ರೇಕ್​, ರೂಲ್ಸ್ ಬ್ರೇಕ್ ಮಾಡಿದ್ರೆ ಕೇಸ್ : ಪೊಲೀಸ್​ ಆಯುಕ್ತ ಕಮಲ್ ಪಂತ್ ಎಚ್ಚರಿಕೆ -Vishwanews24

ಬೆಂಗಳೂರು: ಕೊರೊನಾ ವೈರಸ್​ ರೂಪಾಂತರಗೊಂಡಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ. ಇದರಿಂದ ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಈ ಕುರಿತಂತೆ ನಗರ ಪೊಲೀಸ್​ ಆಯುಕ್ತ ಕಮಲ್​ ಪಂಥ್​ ಅವರು ಸಿಲಿಕಾನ್​ ಸಿಟಿ ಜನರಿಗೆ ಕೆಲ ಮಾಹಿತಿ ಜೊತೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ತಡೆಯಲು ಸದ್ಯ ಮುಂಜಾಗ್ರತ ಕ್ರಮ‌ ಕೈಗೊಳ್ಳಲಾಗಿದೆ. ಹೀಗಾಗಿ ಇಂದಿನಿಂದ ನಗರದಲ್ಲಿ ರಾತ್ರಿ 11ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಇರಲಿದ್ದು, ಯಾವುದೇ ಕಾರ್ಯಕ್ರಮ ನಡೆಯಲು ಅವಕಾಶ ಇರುವುದಿಲ್ಲ. ಇಂದು ಫ್ಲೈ ಓವರ್ ಮೇಲೆ ಅನಗತ್ಯ ವಾಹನಗಳ ಓಡಾಟ ತಡೆಗೆ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಕಾಬಂದಿ ಹಾಕಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕ್ರಿಸ್​​ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಲ್ಲಾ ‌ಹೋಟೆಲ್ ,ರೆಸ್ಟೋರೆಂಟ್​ಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. 2020 ಪ್ರತಿವರ್ಷದಂತೆ ಇರುವುದಿಲ್ಲ. ಕೋವಿಡ್​ ನಿಯಮದ ಪ್ರಕಾರ ಎಲ್ಲಾ ಕೆಲಸಗಳು‌ ಮುಗಿಯಬೇಕು. 11 ಗಂಟೆ ರೋಡ್ ಮೇಲೆ ಸಂಚರಿಸಲು ಅವಕಾಶ ಇರುವುದಿಲ್ಲ. ರಾತ್ರಿ ವೇಳೆ ಕಂಪನಿಗಳಲ್ಲಿ ‌ಕೆಲಸ ಮಾಡುವವರಿಗೆ ಯಾವುದೇ ನಿರ್ಬಂಧವಿಲ್ಲ, ಜನವರಿ 01ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದ್ದು, ಸರ್ಕಾರದ ನಿಯಗಳನ್ನು ಜನತೆ ಪಾಲಿಸಬೇಕು. ದೂರದೂರುಗಳಿಗೆ ಪ್ರಯಾಣಿಸುವ ಬಸ್, ರೈಲ್ವೆ, ವಿಮಾನಯಾನ ಯಥಾಸ್ಥಿತಿ ಇದ್ದು, ಏರ್​​ಪೋರ್ಟ್ ಟ್ಯಾಕ್ಸಿ, ರೈಲ್ವೆ ನಿಲ್ದಾಣದ ಬಳಿ ಆಟೋ-ಟ್ಯಾಕ್ಸಿ ಲಭ್ಯ ಇರಲಿವೆ ಎಂದು ತಿಳಿಸಿದರು.

11 ಗಂಟೆ ಮೇಲೆ ಓಡಾಟ ಇರುವುದಿಲ್ಲ:

ಸರ್ಕಾರದ ಆದೇಶಗಳನ್ನು ಜನರು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಅನಾವಶ್ಯಕವಾಗಿ ಸಂಚಾರ ನಡೆಸಿದರೆ ಅಂತವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. 11 ಗಂಟೆ ಮೇಲೆ ಎಲ್ಲರೂ ಮನೆ ಸೇರಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

ವರ್ಷಾಚರಣೆಗೆ ಬ್ರೇಕ್​:

ಹೊಸ ವರ್ಷಾಚರಣೆ ದಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಯಾವುದೇ ಆಚರಣೆ ಇರಲ್ಲ. 11 ಗಂಟೆ ಬಳಿಕ ವಿನಾಕಾರಣ ರಸ್ತೆಗಳಿಯುವಂತಿಲ್ಲ. ಒಂದು ವೇಳೆ ರೂಲ್ಸ್ ಬ್ರೇಕ್ ಮಾಡಿದರೆ ಅಂಥವರನ್ನು ಕಸ್ಟಡಿಗೆ ಪಡೆದು ಕೇಸ್ ದಾಖಲಿಸಿಕೊಳ್ಳಲಾಗುವುದು ಎಂದು ಖಡಕ್​ ಸಂದೇಶ ರವಾನಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago