Featured

ಬೆಂಗಳೂರು : ಪಾರ್ಕಿಂಗ್ ನೀತಿ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ -Vishwanews24

ಬೆಂಗಳೂರು : ಪಾರ್ಕಿಂಗ್ ನೀತಿ ಜಾರಿಗೆ ರಾಜ್ಯ ಸರ್ಕಾರದ ನಿರ್ಧಾರ -Vishwanews24

ಬೆಂಗಳೂರು : ರಾಜಧಾನಿ ಬೆಂಗಳೂರಿನಾದ್ಯಂತ ಪ್ರಮುಖ ಸ್ಥಳಗಳಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಸಂಗ್ರಹಿಸಲು ಮತ್ತು ಸಂಚಾರ ಶಿಸ್ತನ್ನು ತರುವ ನಿಟ್ಟಿನಲ್ಲಿ ಪಾರ್ಕಿಂಗ್ ನೀತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಪಾರ್ಕಿಂಗ್ ನೀತಿಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯ ಬಳಿಕ ಮಾಧ್ಯಮಗಳಿಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಈ ವಿಷಯ ತಿಳಿಸಿದರು.

ಪಾರ್ಕಿಂಗ್ ಶುಲ್ಕವನ್ನು ಯಾವ ರೀತಿ ಸಂಗ್ರಹಿಸಬೇಕು ಮತ್ತು ಇನ್ನಿತರೆ ಮಾನದಂಡಗಳು ಹಾಗೂ ಮಾರ್ಗಸೂಚಿ ತಯಾರಿಸಿ ಕರಡು ನೀತಿಯನ್ನು ಸಿದ್ಧಪಡಿಸಲು ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ. ನಗರದಲ್ಲಿ ಪ್ರಸ್ತುತ 80-85 ಸ್ಥಳಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ನಗರದ ಎಲ್ಲಾ ಕಡೆ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸುವ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಮತ್ತು ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಪಾರ್ಕಿಂಗ್ ಶುಲ್ಕ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ನಗರದಲ್ಲಿನ ಸಮನಚಾರ ದಟ್ಟಣೆಯನ್ನು ಕಡಿಮೆ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಕಠಿಣ ಕ್ರಮ ಜರುಗಿಸುವುದೂ ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದರು.

ಮುಖ್ಯ ಕಾರ್ಯದರ್ಶಿಗಳು ಅಧ್ಯಯನ ನಡೆಸಿ ಸರ್ಕಾರಕ್ಕೆ ಕರಡು ಸಲ್ಲಿಸಲಿದ್ದಾರೆ. ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿಗೆ ತರುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಸವರಾಜ್, ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳು ಹಾಜರಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

11 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

12 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

12 hours ago