ಬೆಂಗಳೂರು: అಪರಿಚಿತರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ನಿಮ್ಮ ಸ್ನೇಹಿತರಿಗೆ ಹಣ ಕಳಹಿಸುವಂತೆ ಸಂದೇಶ ಕಳಿಸಬಹುದು. ಇದರ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಹೆಚ್ಚುತ್ತಿರುವ ಸೈಬರ್ ಕ್ರೈಂ ಬಗ್ಗೆ ಆಗಾಗ ಹೇಳುತ್ತಿದ್ದರು. ಆದರೆ, ಇದೀಗ ಸೈಬರ್ ಕಳ್ಳರು ನಗರ ಪೊಲೀಸ್ ಆಯುಕ್ತರನ್ನೂ ಬಿಟ್ಟಿಲ್ಲ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಮಾಡಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ನಕಲಿ ಈ ವಿಚಾರ ಗೊತ್ತಾಗುತ್ತಿದ್ದಂತೆ ಖಾತೆಯನ್ನು ನಗರ ಸೈಬರ್ ಕ್ರೈಂ ಠಾಣೆ ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.
ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಯತ್ನ ನಡೆದಿದೆ. ಸೈಬರ್ ಕಳ್ಳರು ಬಿ.ದಯಾನಂದ್ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವರ ಆಪ್ತರು, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಸ್ನೇಹಿತರಾಗಲು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು. ನಂತರ ಅವರಿಂದ ಹಣ ಲಪಟಾಯಿಸಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರ ಸೈಬರ್ ಅಪರಾಧ ವಿಭಾಗದ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಫೇಸ್‌ಬುಕ್ ನಕಲಿ ಖಾತೆಯನ್ನು ನಿಷ್ಕ್ರಿಯ ಮಾಡಿ, ಆರೋಪಿ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.
ಕೋರಿಕೆ ಸ್ವೀಕರಿಸದಂತೆ ಸಲಹೆ: ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು, ಕೋರಿಕೆಯನ್ನು ಸ್ವೀಕರಿಸಬಾರದು. ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…