Featured

ಬೆಂಗಳೂರು: ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಹಣ ವಸೂಲಿಗೆ ಯತ್ನ  ; ಕೋರಿಕೆ ಸ್ವೀಕರಿಸದಂತೆ ಸಲಹೆ – vishwanews24

ಬೆಂಗಳೂರು: ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಹಣ ವಸೂಲಿಗೆ ಯತ್ನ  ; ಕೋರಿಕೆ ಸ್ವೀಕರಿಸದಂತೆ ಸಲಹೆ

ಬೆಂಗಳೂರು: అಪರಿಚಿತರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ನಿಮ್ಮ ಸ್ನೇಹಿತರಿಗೆ ಹಣ ಕಳಹಿಸುವಂತೆ ಸಂದೇಶ ಕಳಿಸಬಹುದು. ಇದರ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಹೆಚ್ಚುತ್ತಿರುವ ಸೈಬರ್ ಕ್ರೈಂ ಬಗ್ಗೆ ಆಗಾಗ ಹೇಳುತ್ತಿದ್ದರು. ಆದರೆ, ಇದೀಗ ಸೈಬರ್ ಕಳ್ಳರು ನಗರ ಪೊಲೀಸ್ ಆಯುಕ್ತರನ್ನೂ ಬಿಟ್ಟಿಲ್ಲ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಮಾಡಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಕಲಿ ಈ ವಿಚಾರ ಗೊತ್ತಾಗುತ್ತಿದ್ದಂತೆ ಖಾತೆಯನ್ನು ನಗರ ಸೈಬರ್ ಕ್ರೈಂ ಠಾಣೆ ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.

ನಗರ ಪೊಲೀಸ್‌ ಕಮಿಷನರ್ ಬಿ.ದಯಾನಂದ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ ಯತ್ನ ನಡೆದಿದೆ. ಸೈಬರ್ ಕಳ್ಳರು ಬಿ.ದಯಾನಂದ್ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವರ ಆಪ್ತರು, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಸ್ನೇಹಿತರಾಗಲು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು. ನಂತರ ಅವರಿಂದ ಹಣ ಲಪಟಾಯಿಸಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರ ಸೈಬರ್ ಅಪರಾಧ ವಿಭಾಗದ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಫೇಸ್‌ಬುಕ್ ನಕಲಿ ಖಾತೆಯನ್ನು ನಿಷ್ಕ್ರಿಯ ಮಾಡಿ, ಆರೋಪಿ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

ಕೋರಿಕೆ ಸ್ವೀಕರಿಸದಂತೆ ಸಲಹೆ: ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು, ಕೋರಿಕೆಯನ್ನು ಸ್ವೀಕರಿಸಬಾರದು. ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಅಥವಾ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

15 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago