Featured

ಬೆಂಗಳೂರು: ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ : ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ : ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ಕಳೆದ ಎರಡೂವರೆ ವರ್ಷದಿಂದ ಅತಿ ಹೆಚ್ಚು ಡ್ರಗ್ ಸೀಜ್ ಮಾಡಲಾಗಿದ್ದು, ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಶ್ರೀಕೃಷ್ಣ ಎಂಬಾತನ ಬಂಧನವಾಗಿದೆ. ಡ್ರಗ್ ಜತೆಗೆ ಆತ ಹ್ಯಾಕಿಂಗ್ ಕೂಡ ಮಾಡುತ್ತಿದ್ದ. ನಂತರ 2020 ರಲ್ಲಿ ನಮ್ಮ ಸರ್ಕಾರ ಆತನನ್ನು ಬಂಧನ ಮಾಡಿದೆ. ನಂತರ ವಿಚಾರಣೆ ವೇಳೆ ಶ್ರೀಕಿ ಹ್ಯಾಕರ್ ಎಂದು ಗೊತ್ತಾಗುತ್ತದೆ. ಡಾರ್ಕ್ ವೆಬ್ ಸೇರಿ‌ ಬೇರೆ ಹಣಕಾಸು ಸಂಸ್ಥೆಗಳ ವೆಬ್ ಸೈಟ್ ಹ್ಯಾಕ್ ಮಾಡಿದ್ದು ಗೊತ್ತಾಗುತ್ತದೆ. ಮೂರು ಕೇಸ್ ಆತನ ಮೇಲಿದೆ. ಮನಿ ಲಾಂಡರಿಂಗ್, ಹ್ಯಾಕಿಂಗ್, ಡ್ರಗ್ ಕೇಸ್ ನಲ್ಲಿ ಆತ ಶಾಮೀಲಾಗಿದ್ದಾನೆ” ಎಂದರು.

ಇನ್ನು 2018 ರಲ್ಲಿ ಶ್ರೀಕಿ ಮೇಲೆ ಕೇಸ್ ಬಂದಿದ್ದು, ಆತನ ಜತೆ ಇದ್ದ ಐದಾರು ಜನರ ಬಂಧನವಾಗುತ್ತದೆ. ಆದರೆ ಶ್ರೀಕಿ ಬಂಧನ ಮಾಡಿರಲ್ಲ. ಆಗ ಯಾವ ಸರ್ಕಾರ ಇತ್ತು‌ ಗಮನಿಸಿ. ನಂತರ ಆತನಿಗೆ ಬೇಲ್ ಸಿಗುತ್ತದೆ. ಬೇಲ್ ಸಿಕ್ಕ ಬಳಿಕವೂ ಕರೆಸಿ ವಿಚಾರಣೆ ಮಾಡಲ್ಲ. ಯುಬಿ ಸಿಟಿ ದಾಂಧಲೆ ಪ್ರಕರಣದಲ್ಲಿ ಆತನ‌ ಬಂಧನ ಆಗಿರುತ್ತದೆ. ಆಗಲೇ ಸರಿಯಾಗಿ ವಿಚಾರಣೆ ಮಾಡಿದ್ದಿದ್ದರೆ ಆತನ ಇತರೆ ದುಷ್ಕೃತ್ಯ, ಡ್ರಗ್ ವಿಚಾರ ಬಯಲಿಗೆ ಬರುತ್ತಿತ್ತು” ಎಂದಿದ್ದಾರೆ.

ನಾವು ಅತ್ಯಂತ ಪ್ರಾಮಾಣಿಕತೆಯಿಂದ ತನಿಖೆ ಮಾಡಿದ್ದೇವೆ. ಈ ಕೇಸ್ ನಲ್ಲಿ ಕಾಂಪ್ರಮೈಸ್ ಇಲ್ಲ, ನಾವು ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಬಿಟ್ ಕಾಯಿನ್, ಮನಿ‌ಲಾಂಡರಿಂಗ್, ಡ್ರಗ್ ಕೇಸ್ ನಲ್ಲಿ ಯಾರೇ ಇದ್ದರೂ ತನಿಖೆ ಮಾಡುತ್ತೇವೆ. ತಪ್ಪಿತಸ್ಥರ ರಕ್ಷಣೆ ಮಾಡ್ತಿಲ್ಲ. ಯಾರೇ ಪ್ರಭಾವಿ ಇದ್ದರೂ ಕ್ರಮ ಕೈಗೊಳ್ಳುತ್ತೇವ ಎಂದು ಸಿಎಂ ಭರವಸೆ ನೀಡಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago