ಬೆಂಗಳೂರು : ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮಾತನಾಡಬಹುದೇ ಎಂದು ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ ಎಂದರು.
ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು ಎಂದರು.
ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟೀಸ್ ಜಾರಿ ಮಾಡಿತ್ತು ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…