ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ ಚಾಣಾಕ್ಷತನದಿಂದ ಬಸ್ ಕಂಡಕ್ಟರ್ ಬ್ಯಾಗ್ ಅನ್ನೇ ಮಹಿಳೆಯೊಬ್ಬಳು ಕಳುವು ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಬೆಂಗಳೂರು ನಗರದಲ್ಲಿ KA 57F 6331 ಸಂಖ್ಯೆಯ ಬಿಎಂಟಿಸಿ ಬಸ್‌ಗೆ ಪ್ರಯಾಣಿಕಳಂತೆ ಹತ್ತಿದ್ದ ಮಹಿಳೆಯೊಬ್ಬಳು ನಿರ್ವಾಹಕರ ಗಮನ ಬೇರೆಡೆ ಇದ್ದಾಗ ಹಣದ ಬ್ಯಾಗ್ ಅನ್ನು ತನ್ನ ಚೀಲದಲ್ಲಿ ಇಟ್ಟುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.
ಕಳ್ಳತನದ ಬಳಿಕ ಬಸ್‌ನಲ್ಲೇ ಅಮಾಯಕಳಂತೆ ವರ್ತಿಸುತ್ತಿದ್ದ ವೇಳೆ ನಿರ್ವಾಹಕರಿಗೆ ಅನುಮಾನ ಬಂದಿದೆ. ಬಳಿಕ ಮಹಿಳೆಯನ್ನು ಪ್ರಶ್ನಿಸಿದಾಗ ಆಕೆ ಪರಾರಿಯಾಗಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳಕ್ಕೆ ಬಂದ ಮಹಿಳಾ ಪೊಲೀಸ್ ಸಿಬ್ಬಂದಿ ವಿಚಾರಣೆ ನಡೆಸಿದ್ದಾಗ, ‘ನಾನು ಮನೆಗೆ ಹೋಗಬೇಕು, ನನ್ನ ಗಂಡನಿಗೆ ಆರೋಗ್ಯ ಸರಿಯಿಲ್ಲ’ ಎಂದು ಹೇಳುತ್ತಾ ಹೈಡ್ರಾಮಾ ನಡೆಸಿದ್ದಾಳೆ. ಆದರೆ, ಆಕೆಯ ಚೀಲ ಪರಿಶೀಲಿಸಿದಾಗ ನಿರ್ವಾಹಕರ ಹಣದ ಬ್ಯಾಗ್ ಪತ್ತೆಯಾಗಿದೆ.
ಬಸ್ ನಿರ್ವಾಹಕರು ಮಹಿಳೆಯನ್ನು ಪೊಲೀಸರಿಗೆ ಒಪ್ಪಿಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ಬಸ್ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸರಗಳ್ಳತನ ಮತ್ತು ಪಿಕ್‌ಪಾಕೆಟ್ ಪ್ರಕರಣಗಳಲ್ಲಿ ಮಹಿಳೆಯರ ಶಾಮೀಲಾಗುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…