ಬೆಂಗಳೂರು: ಪ್ರಿಯತಮೆಯೇ ಸಿನಿಮೀಯ ರೀತಿಯಲ್ಲಿ ಪ್ರಿಯಕರನ ಮೇಲೆ ರಾಬರಿ ಮಾಡಿಸಿ, ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಕಳ್ಳತನ ಮಾಡಿಸಿದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶೃತಿ ಭೇಟಿಗೆ ತೆರಳಿದ್ದ. ಅದರಂತೆ ಭೇಟಿಯಾಗಿ ಆಕೆಯನ್ನು ಕರೆದುಕೊಂಡು ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದವರು, ವಂಶಿಕೃಷ್ಣನ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ.
ಈ ವೇಳೆ ಜಗಳ ತೆಗೆದು ಆತನ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ. ಅಲ್ಲದೇ ವಂಶಿಕೃಷ್ಣನ ಜೊತೆಯಲ್ಲಿಯೇ ಇದ್ದ ಶೃತಿಯ ಮೊಬೈಲ್ನ್ನು ಸಹ ಕಸಿದು ಕೊಂಡಿದ್ದಾರೆ. ನಂತರ ದೂರು ಕೊಡುವುದು ಬೇಡ, ಮೊಬೈಲ್ ಹೋದರೆ ಹೋಗಲಿ ಎಂದು ಪ್ರಿಯತಮೆ ಶೃತಿ, ವಂಶಿ ಮುಂದೆ ಡ್ರಾಮ ಮಾಡಿದ್ದಾಳೆ. ಆದರೂ, ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ಕಾರಿನ ನಂಬರ್ ಸಮೇತ ದೂರು ನೀಡಿದ್ದರು. ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಪೊಲೀಸರ ವಿಚಾರಣೆ ವೇಳೆ ಶೃತಿಯೇ ಬೈಕ್ಗೆ ಡಿಕ್ಕಿ ಮಾಡಿ ಮೊಬೈಲ್ ಕಸಿದುಕೊಳ್ಳಲಿಕ್ಕೆ ಹೇಳಿದ್ದಳು ಎಂಬುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹೌದು, ಇತ್ತೀಚೆಗೆ ವಂಶಿಕೃಷ್ಣನಿಂದ ದೂರವಾಗಲು ಶೃತಿ ಯತ್ನಿಸುತ್ತಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್ನಲ್ಲಿ ಇಬ್ಬರು ಜೊತೆಗಿದ್ದ ಫೋಟೋಗಳಿದ್ದವು. ಈ ಹಿನ್ನಲೆ ಫೋಟೋಸ್, ವಿಡಿಯೋಸ್ ಡಿಲೀಟ್ ಮಾಡಿಸಲಿಕ್ಕೆ ಒಂದೂವರೆ ಲಕ್ಷ ಹಣ ಕೊಟ್ಟು ಮೊಬೈಲ್ ರಾಬರಿ ಮಾಡುವ ಖರ್ತನಾಕ್ ಪ್ಲಾನ್ ಮಾಡಿರುವುದು ತನಿಖೆ ಬಳಿಕ ತಿಳಿದಿದೆ. ಸಧ್ಯ ಬೆಳ್ಳಂದೂರು ಪೊಲೀಸರಿಂದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…