Featured

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೆ ಮದುವೆ – ಪ್ರೇಯಸಿಯ ಅತ್ಯಾಚಾರ ಮಾಡಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ – Vishwanews24

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೆ ಮದುವೆ – ಪ್ರೇಯಸಿಯ ಅತ್ಯಾಚಾರ ಮಾಡಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಿದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ನಲ್ಲಿ ನಡೆದಿದೆ.

ವಿಲ್ಸನ್‌ಗಾರ್ಡನ್‌ ವಿನಾಯಕನಗರ ನಿವಾಸಿ 23 ವರ್ಷ ಪ್ರಾಯದ ಶಾಲಿನಿ ಕೊಲೆಯಾದ ಯುವತಿ. ಕೃತ್ಯ ಎಸಗಿದ ಆಕೆಯ ಪ್ರಿಯಕರ, ಕೆ.ಪಿ.ಅಗ್ರಹಾರ ನಿವಾಸಿ ಮನೋಜ್‌ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಂಡ ಬಳಿಕ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.9ನೇ ತರಗತಿ ವ್ಯಾಸಂಗ ಮಾಡಿದ್ದ ಶಾಲಿನಿ ಮತ್ತು ಆರೋಪಿ ಮನೋಜ್‌ ಈ ಹಿಂದೆ ಪ್ರತ್ಯೇಕ ಮೆಡಿಕಲ್‌ ಏಜೆನ್ಸಿಗಳಲ್ಲಿ ಕೆಲಸ ಮಾಡುತ್ತಿದ್ದರು.ಆಗ ಮನೋಜ್‌, ಶಾಲಿನಿಗೆ ಪ್ರೇಮ ನಿವೇದನೆ ಮಾಡಿ ಕೊಂಡಿದ್ದ. ಆದರೆ, ಆಕೆ ನಿರಾಕರಿಸಿದ್ದಳು.ಬಳಿಕ ಆತ ಕೆಲಸ ಬಿಟ್ಟು ರಸ್ತೆ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರ ಜತೆ ಕೆಲಸ ಮಾಡುತ್ತಿದ್ದ.

ಈ ವೇಳೆ ಫೇಸ್‌ಬುಕ್‌ ಮೂಲಕ ಮತ್ತೆ ಇಬ್ಬರು ಪರಿಚಯವಾಗಿದ್ದು, ಬಳಿಕ ಇಬ್ಬರು ಆಗಾಗ ಭೇಟಿಯಾಗುತ್ತಿದ್ದರು.ಈ ಸಂದರ್ಭದಲ್ಲಿ ಮನೋಜ್‌ ಮತ್ತೂಮ್ಮೆ ಶಾಲಿನಿಗೆ ಪ್ರೇಮ ನಿವೇದಿಸಿದ್ದಾನೆ. ಆಕೆ ಕೂಡಾ ಒಪ್ಪಿಕೊಂಡು ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಈ ನಡುವೆ ಶಾಲಿನಿಗೆ ಆಕೆಯ ಪೋಷಕರು ಸಂಬಂಧಿ ಯುವಕನ ಜತೆ ಮದುವೆ ಮಾಡಲು ಮುಂದಾಗಿದ್ದು, ಸೋಮವಾರ ಮತ್ತು ಮಂಗಳವಾರ ಕೆಲ ಶುಭ ಕಾರ್ಯಗಳನ್ನು ಏರ್ಪಡಿಸಿದ್ದರು.ಮಂಗಳವಾರ ಸಂಜೆ ಪೋಷಕರು, ಸಂಬಂಧಿಕರು, ಶಾಲಿನಿ ಮನೆ ಸಮೀಪದ ಸಂಬಂಧಿ ಮನೆಯಲ್ಲಿದ್ದರು.

ಇದೇ ವೇಳೆ ಪ್ರೇಯಸಿ ಮತ್ತೂಂದು ಮದುವೆ ಆಗುತ್ತಿದ್ದಾಳೆ ಎಂಬ ವಿಚಾರ ತಿಳಿದ ಮನೋಜ್‌, ಸಂಜೆ 7 ಗಂಟೆ ಸುಮಾರಿಗೆ ವಿನಾಯಕ ನಗರದ ಶಾಲಿನಿ ಮನೆ ಬಳಿ ಬಂದಿದ್ದಾನೆ.

ಮನೆಯಲ್ಲಿ ಯಾರು ಇಲ್ಲದನ್ನು ಖಚಿತ ಪಡಿಸಿಕೊಂಡು ಆಕೆ ಜತೆ ಮದುವೆ ವಿಚಾರವಾಗಿ ಜಗಳಾಡಿದ್ದಾನೆ.ಆಕೆ ಪೋಷಕರ ತೀರ್ಮಾನವೇ ಅಂತಿಮ ಎಂದಿದ್ದಾಳೆ. ಆಕೆಯ ಮಾತಿನಿಂದ ಆಕ್ರೋಶಗೊಂಡ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಬಳಿಕ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

ಬಳಿಕ ಕೆ.ಪಿ.ಅಗ್ರಹಾರದಲ್ಲಿರುವ ಆತನ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಅದನ್ನು ಗಮನಿಸಿದ ಮನೆಯವರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತೂಂದೆಡೆ ರಾತ್ರಿ 10 ಗಂಟೆ ಸುಮಾರಿಗೆ ಪೋಷಕರು ಮನೆಗೆ ಬಂದಾಗ ಶಾಲಿನಿ ಹತ್ಯೆ ಬೆಳಕಿಗೆ ಬಂದಿದೆ.

ಈ ಸಂಬಂಧ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಕೊಲೆ, ಅತ್ಯಾಚಾರ ಪ್ರಕರಣ ಹಾಗೂ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಮನೋಜ್‌ ವಿರುದ್ಧ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

1 hour ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

2 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

3 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

3 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

3 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

3 hours ago