ಬೆಂಗಳೂರು : ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಿದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ನಲ್ಲಿ ನಡೆದಿದೆ.
ವಿಲ್ಸನ್‌ಗಾರ್ಡನ್ ವಿನಾಯಕನಗರ ನಿವಾಸಿ 23 ವರ್ಷ ಪ್ರಾಯದ ಶಾಲಿನಿ ಕೊಲೆಯಾದ ಯುವತಿ. ಕೃತ್ಯ ಎಸಗಿದ ಆಕೆಯ ಪ್ರಿಯಕರ, ಕೆ.ಪಿ.ಅಗ್ರಹಾರ ನಿವಾಸಿ ಮನೋಜ್ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಂಡ ಬಳಿಕ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.9ನೇ ತರಗತಿ ವ್ಯಾಸಂಗ ಮಾಡಿದ್ದ ಶಾಲಿನಿ ಮತ್ತು ಆರೋಪಿ ಮನೋಜ್ ಈ ಹಿಂದೆ ಪ್ರತ್ಯೇಕ ಮೆಡಿಕಲ್ ಏಜೆನ್ಸಿಗಳಲ್ಲಿ ಕೆಲಸ ಮಾಡುತ್ತಿದ್ದರು.ಆಗ ಮನೋಜ್, ಶಾಲಿನಿಗೆ ಪ್ರೇಮ ನಿವೇದನೆ ಮಾಡಿ ಕೊಂಡಿದ್ದ. ಆದರೆ, ಆಕೆ ನಿರಾಕರಿಸಿದ್ದಳು.ಬಳಿಕ ಆತ ಕೆಲಸ ಬಿಟ್ಟು ರಸ್ತೆ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರ ಜತೆ ಕೆಲಸ ಮಾಡುತ್ತಿದ್ದ.
ಈ ವೇಳೆ ಫೇಸ್‌ಬುಕ್ ಮೂಲಕ ಮತ್ತೆ ಇಬ್ಬರು ಪರಿಚಯವಾಗಿದ್ದು, ಬಳಿಕ ಇಬ್ಬರು ಆಗಾಗ ಭೇಟಿಯಾಗುತ್ತಿದ್ದರು.ಈ ಸಂದರ್ಭದಲ್ಲಿ ಮನೋಜ್ ಮತ್ತೂಮ್ಮೆ ಶಾಲಿನಿಗೆ ಪ್ರೇಮ ನಿವೇದಿಸಿದ್ದಾನೆ. ಆಕೆ ಕೂಡಾ ಒಪ್ಪಿಕೊಂಡು ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಈ ನಡುವೆ ಶಾಲಿನಿಗೆ ಆಕೆಯ ಪೋಷಕರು ಸಂಬಂಧಿ ಯುವಕನ ಜತೆ ಮದುವೆ ಮಾಡಲು ಮುಂದಾಗಿದ್ದು, ಸೋಮವಾರ ಮತ್ತು ಮಂಗಳವಾರ ಕೆಲ ಶುಭ ಕಾರ್ಯಗಳನ್ನು ಏರ್ಪಡಿಸಿದ್ದರು.ಮಂಗಳವಾರ ಸಂಜೆ ಪೋಷಕರು, ಸಂಬಂಧಿಕರು, ಶಾಲಿನಿ ಮನೆ ಸಮೀಪದ ಸಂಬಂಧಿ ಮನೆಯಲ್ಲಿದ್ದರು.
ಇದೇ ವೇಳೆ ಪ್ರೇಯಸಿ ಮತ್ತೂಂದು ಮದುವೆ ಆಗುತ್ತಿದ್ದಾಳೆ ಎಂಬ ವಿಚಾರ ತಿಳಿದ ಮನೋಜ್, ಸಂಜೆ 7 ಗಂಟೆ ಸುಮಾರಿಗೆ ವಿನಾಯಕ ನಗರದ ಶಾಲಿನಿ ಮನೆ ಬಳಿ ಬಂದಿದ್ದಾನೆ.
ಮನೆಯಲ್ಲಿ ಯಾರು ಇಲ್ಲದನ್ನು ಖಚಿತ ಪಡಿಸಿಕೊಂಡು ಆಕೆ ಜತೆ ಮದುವೆ ವಿಚಾರವಾಗಿ ಜಗಳಾಡಿದ್ದಾನೆ.ಆಕೆ ಪೋಷಕರ ತೀರ್ಮಾನವೇ ಅಂತಿಮ ಎಂದಿದ್ದಾಳೆ. ಆಕೆಯ ಮಾತಿನಿಂದ ಆಕ್ರೋಶಗೊಂಡ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಬಳಿಕ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.
ಬಳಿಕ ಕೆ.ಪಿ.ಅಗ್ರಹಾರದಲ್ಲಿರುವ ಆತನ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಅದನ್ನು ಗಮನಿಸಿದ ಮನೆಯವರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮತ್ತೂಂದೆಡೆ ರಾತ್ರಿ 10 ಗಂಟೆ ಸುಮಾರಿಗೆ ಪೋಷಕರು ಮನೆಗೆ ಬಂದಾಗ ಶಾಲಿನಿ ಹತ್ಯೆ ಬೆಳಕಿಗೆ ಬಂದಿದೆ.
ಈ ಸಂಬಂಧ ವಿಲ್ಸನ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಕೊಲೆ, ಅತ್ಯಾಚಾರ ಪ್ರಕರಣ ಹಾಗೂ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಮನೋಜ್ ವಿರುದ್ಧ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…