ಬೆಂಗಳೂರು: ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ಗೆ ಬೀಗ ಹಾಕಿದೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ.
ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿಲ್ಲ, ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿದಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ಈ ವೇಳೆ ಸಹ ತೆರಿಗೆ ಕಟ್ಟಿಲ್ಲ. ಹೀಗಾಗಿ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ವಿಮ ಡಿಸಿ ಪ್ರಸನ್ನ ಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಮಾದಕ ವಸ್ತು ಮಾರಾಟ : ಬಾಲಿವುಡ್ ಸೇರಿ ಹಲವಾರು ಚಿತ್ರದಲ್ಲಿ ನಟಿಸಿದ್ದ ನೈಜೀರಿಯನ್ ನಟನ ಬಂಧನ -Vishwanews24
ಎಷ್ಟೇ ನೋಟಿಸ್ ನೀಡಿದರೂ ಮಂತ್ರಿ ಮಾಲ್ ಮಾತ್ರ ಬುದ್ಧಿ ಕಲಿತಿಲ್ಲ. ಪ್ರತಿಷ್ಟಿತ ಮಂತ್ರಿ ಮಾಲ್ 39 ಕೋಟಿ ರೂಪಾಯಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ತೆರಿಗೆ ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. 2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಹಿನ್ನೆಲೆ ಮಂತ್ರಿ ಮಾಲ್ ಗೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಂತ್ರಿ ಮಾಲ್ ಗೆ ಬೀಗ ಹಾಕಲಾಗಿತ್ತು. ಬಳಿಕ 5 ಕೋಟಿ ರೂ. ಪಾವತಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರಿಂದ ಬೀಗ ತೆರವುಗೊಳಿಸಲಾಗಿದೆ.
ಆಸ್ತಿ ತೆರಿಗೆ ಪಾವತಿಸುವವರೆಗೂ ಮಂತ್ರಿ ಮಾಲ್ಗೆ ಬೀಗ ಮುಂದುವರಿಯಲಿದೆ. ಈ ಮಧ್ಯೆ, ಆಸ್ತಿ ತೆರಿಗೆ ಪಾವತಿಸಲು ಮಂತ್ರಿ ಮಾಲ್ ನೀಡಿದ್ದ ಚೆಕ್ ಬೌನ್ಸ್ ಅಗಿದೆ. ಮಂತ್ರಿ ಮಾಲ್‌ನವರು ನೀಡಿದ್ದ ಚೆಕ್ ಬೌನ್ಸ್ ಆದ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಹಾಗಾಗಿ ಇವತ್ತು ಡಿಡಿ ಮುಖಾಂತರ ಪಾವತಿ ಮಾಡಬೇಕಾಗಿದೆ.
ಬಿಬಿಎಂಪಿ (BBMP) ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ. ಮಲ್ಲೇಶ್ವರಕ್ಕೆ ಸ್ವಾಗತ ಕೋರುವಂತೆ ಸಂಪಿಗೆ ರಸ್ತೆಯ ಆರಂಭದಲ್ಲಿರುವ ಮಂತ್ರಿ ಮಾಲ್ (Mantri Square Mall ) ಬರೋಬ್ಬರಿ 20,33,34,828 ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ.
ಇದನ್ನೂ ಓದಿ : ಬಹುದಿನಗಳ ಕನಸು ನನಸು : ಕೇರಳದ ಮುಸ್ಲಿಂ ಯುವತಿಯಿಂದ ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ -Vishwanews24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…