ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ.
ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃತ ಬಾಣಂತಿ ಎಂದು ಗುರುತಿಸಲಾಗಿದೆ.
ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಎಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.
ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸ್ಥಳೀಯ ಪೊಳೀಸ್ ಠಾಣೆಯಲ್ಲಿ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…