ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ  ; ಜನಪ್ರತಿನಿದಿಗಳ ಕೋರ್ಟ್ ಆದೇಶ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ  ; ಜನಪ್ರತಿನಿದಿಗಳ ಕೋರ್ಟ್ ಆದೇಶ

ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್‌ ತೀರ್ಪು ನೀಡಿದೆ. ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ ತಪ್ಪಿತಸ್ಥರು ಎಂದು ಆದೇಶ ಹೊರಡಿಸಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಬೇಕಿದೆ.

2012 ರಲ್ಲಿ ಖಾಸಗಿ ಬ್ಯಾಂಕ್‌ಗೆ ಗ್ಯಾಂಗ್‌ ವಂಚನೆ ಮಾಡಿತ್ತು. ಆರೋಪಿಗಳು ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಿತ್ತು.

ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಸಾಲವನ್ನು ಕೃಷ್ಣ ಶೆಟ್ಟಿ ಪಡೆದುಕೊಂಡಿದ್ದರು.

ಮಸಾಜ್ ಪಾರ್ಲರ್ ಮೇಲೆ ದಾಳಿ  ಪ್ರಕರಣ : ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಜಾಮೀನು ಮಂಜೂರು – vishwanews24

Leave a Reply