ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಈ ವೇಳೆ ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಮೋರಿಗೆ ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ, ಮಗು ಸಜೀವ ದಹನವಾಗಿದ್ದಾರೆ.
ಪತಿ ಮಹೇಂದ್ರನ್, ಪತ್ನಿ ಸಿಂಧು ಮತು ಅವರ ಎರಡು ಮಕ್ಕಳು ಟಾಟಾ ನೆಕ್ಸಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನೆಯಿಂದ ಪತ್ನಿ ಸಿಂಧು, ಎರಡು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪತಿ ಮಹೇಂದ್ರನ್ ಮತ್ತು ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…