Featured

ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ – vishwanews24

ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು: ಪ್ರಯಾಣಿಕರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ನೈರುತ್ಯ ರೈಲು  ಬೇಸಿಗೆ ರಜೆಯ ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದೆ. ಎಸ್​ಎಂವಿಟಿ (SMVT) ಬೆಂಗಳೂರು ಟು ಕೊಲ್ಲಂ ಎಕ್ಸ್‌ಪ್ರೆಸ್  ಮತ್ತು ಎಸ್​ಎಂವಿಟಿ ಬೆಂಗಳೂರು ಟು ಮಂಗಳೂರಿಗೆ ವಿಶೇಷ ರೈಲುಗಳು ಸಂಚರಿಸಲಿವೆ. ಈ ಬಗ್ಗೆ ನೈರುತ್ಯ ರೈಲ್ವೆ ಇಲಾಖೆ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳ ಸಮಯ, ದಿನಾಂಕ ಸೇರಿದಂತೆ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ವಿಶೇಷ ರೈಲುಗಳ ವಿವರ
ರೈಲು ಸಂಖ್ಯೆ 06585: ಎಸ್​​ಎಂವಿಟಿ ಬೆಂಗಳೂರು ಟು ಕೊಲ್ಲಂ ಎಕ್ಸ್‌ಪ್ರೆಸ್. ಏಪ್ರಿಲ್ 19 (ಶನಿವಾರ) ಮಧ್ಯಾಹ್ನ 3:50 ಗಂಟೆಗೆ ಹೊರಟು ಭಾನುವಾರ ಬೆಳಿಗ್ಗೆ 06:20 ಕೊಲ್ಲಂ ತಲುಪುತ್ತದೆ. ದಿನಕ್ಕೆ ಒಂದು ಸೇವೆ ಮಾತ್ರ ಇರಲಿದೆ.

ರೈಲು ಸಂಖ್ಯೆ 06586: ಕೊಲ್ಲಂ ಟು ಎಸ್​ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್. 20 ಏಪ್ರಿಲ್ (ಭಾನುವಾರ) ಸಂಜೆ 5:50 ಕ್ಕೆ ಹೊರಟು ಮರುದಿನ ಅಂದರೆ ಸೋಮವಾರ ಎಸ್​ಎಂವಿಟಿ ಬೆಂಗಳೂರು ಬೆಳಿಗ್ಗೆ 08:35 ಕ್ಕೆ ತಲುಪಲಿದೆ. ದಿನಕ್ಕೆ ಒಂದು ಸೇವೆ ಮಾತ್ರ ಇರಲಿದೆ.

ಯಾವೆಲ್ಲಾ ಕೋಚ್​ಗಳು ಲಭ್ಯ
1 ಎಸಿ ಟು ಟೈಯರ್ ಕೋಚ್, 1 ಎಸಿ ತ್ರೀ ಟೈಯರ್ ಕೋಚ್, 8 ಸ್ಲೀಪರ್ ಕ್ಲಾಸ್ ಕೋಚ್‌ಗಳು, 4 ಜನರಲ್ ಸೆಕೆಂಡ್ ಕ್ಲಾಸ್ ಕೋಚ್‌ಗಳು ಮತ್ತು 2 ಸೆಕೆಂಡ್ ಕ್ಲಾಸ್ ಕೋಚ್‌ಗಳು ಹೊಂದಿವೆ.

ಎಲ್ಲೆಲ್ಲಿ ನಿಲುಗಡೆ?
SMVT ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ, ಕೊಟ್ಟಾಯಂ, ಚಂಗನಾಸ್ಸೆರಿ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕ್ಕರ, ಕಾಯಕುಲಂ ಹಾಗೂ ಕೊಲ್ಲಂ.

ಎಸ್​ಎಂವಿಟಿ ಬೆಂಗಳೂರು-ಮಂಗಳೂರು ವಿಶೇಷ ರೈಲು
ಇದೇ ರೀತಿಯಾಗಿ ಎಸ್​ಎಂವಿಟಿ ಬೆಂಗಳೂರು ಟು ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲುಗಳು ಸಂಚಸಿಲಿವೆ. ರೈಲು ಸಂಖ್ಯೆ 06579: SMVT ಬೆಂಗಳೂರು ಟು ಮಂಗಳೂರು ಜಂಕ್ಷನ್. ಏಪ್ರಿಲ್ 17 ರಂದು ರಾತ್ರಿ 11.55 ಕ್ಕೆ SMVT ಬೆಂಗಳೂರಿನಿಂದ ಹೊರಟು ಮರುದಿನ ಸಂಜೆ 4 ಗಂಟೆಗೆ ಮಂಗಳೂರು ಜಂಕ್ಷನ್ ತಲುಪುತ್ತದೆ.

ರೈಲು ಸಂಖ್ಯೆ 06580: ಮಂಗಳೂರು ಜಂಕ್ಷನ್ ಟು SMVT ಬೆಂಗಳೂರು. ಏಪ್ರಿಲ್ 20 ರಂದು ಮಧ್ಯಾಹ್ನ 2.10 ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಿಗ್ಗೆ 7.30 ಕ್ಕೆ SMVT ಬೆಂಗಳೂರು ತಲುಪುತ್ತದೆ.

ಎಲ್ಲೆಲ್ಲಿ ನಿಲುಗಡೆ?
SMVT ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಕೋಜಿಕೋಡ್, ವಡಕರ, ತಲಸ್ಸೆರಿ, ಕಣ್ಣೂರು, ಪಯ್ಯನೂರು, ಕಾಞಂಗಾಡ್, ಕಾಸರಗೋಡು ಹಾಗೂ ಮಂಗಳೂರು.

ಯಾವೆಲ್ಲಾ ಕೋಚ್​ಗಳು ಲಭ್ಯ
1 ಪ್ರಥಮ ದರ್ಜೆ ಎಸಿ ಕೋಚ್, 2 ಎಸಿ ಟೂ-ಟೈರ್ ಕೋಚ್‌ಗಳು, 4 ಎಸಿ ತ್ರೀ-ಟೈರ್ ಕೋಚ್‌ಗಳು, 7 ಸ್ಲೀಪರ್ ಕ್ಲಾಸ್ ಕೋಚ್‌ಗಳು, 4 ಸಾಮಾನ್ಯ ದ್ವಿತೀಯ ದರ್ಜೆ ಕೋಚ್‌ಗಳು ಮತ್ತು 2 ಸಾಮಾನ್ಯ ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್​​ ಕೋಚ್‌ಗಳು ಹೊಂದಿವೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago