ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ ರೈಲ್ವೆ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜತೆಗೆ ರಾಜಧಾನಿಯಿಂದ ಕರಾವಳಿ ಭಾಗದ ಮಂಗಳೂರಿಗೆ ಕೂಡ ಇದೇ ರೀತಿ ಚತುಷ್ಪಥ ಮಾರ್ಗ ಅಭಿವೃದ್ಧಿಯನ್ನೂ ಪರಿಗಣಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನ ಎಲೆಕೇರಿ ಬಳಿ ನೂತನವಾಗಿ ನಿರ್ಮಿಸಿರುವ ರಸ್ತೆ ಮೇಲ್ಸೇತುವೆ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಇದಕ್ಕೂ ಮೊದಲು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಕರ್ನಾಟಕದ ರೈಲ್ವೇ ಬೇಡಿಕೆಗಳನ್ನು ಸಮಾರಂಭದಲ್ಲಿ ಪ್ರಸ್ತಾಪಿಸಿದ್ದರು. ಇದರಲ್ಲಿ ಅವರು ಬೆಂಗಳೂರಿನಿಂದ ತುಮಕೂರು, ಮೈಸೂರು, ಗೌರಿಬಿದನೂರು ಮಾರ್ಗವಾಗಿ ಹಿಂದೂಪುರ ಮತ್ತು ಕೋಲಾರಕ್ಕೆ ಚತುಷ್ಪಥ ಹಳಿ ನಿರ್ಮಿಸಬೇಕು ಎಂದು ಕೋರಿದ್ದರು.
ಈ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸೋಮಣ್ಣ, ಬೆಂಗಳೂರು-ತುಮಕೂರು ಚತುಷ್ಪಥ ಮಾರ್ಗದ ಸರ್ವೆ ಮುಗಿದಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು. ಮುಂದಿನ ಒಂದೂವರೆ- ಎರಡು ವರ್ಷದಲ್ಲಿ ಕಾಮಗಾರಿ ಮುಗಿಸುವ ಉದ್ದೇಶ ಇದೆ. ಹಾಗೆಯೇ ಬೆಂಗಳೂರು- ಮೈಸೂರು ಚತುಷ್ಪಥ ನಿರ್ಮಾಣಕ್ಕೆ ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದರು.
ರಾಜಧಾನಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ತ್ವರಿತ ರೈಲು ಸಂಚಾರ ವ್ಯವಸ್ಥೆ ಆಗಬೇಕಿದೆ. ಇದಕ್ಕಾಗಿ ಸಕಲೇಶಪುರ-ಗುಂಡ್ಯ ನಡುವೆ ಸಮಾನಾಂತರವಾಗಿ ರಸ್ತೆ ಮತ್ತು ರೈಲು ಮಾರ್ಗ ಆಗಬೇಕೆಂದು ಪಾಟೀಲ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಸ್ಪಂದಿಸಿದ ಸೋಮಣ್ಣ ಅವರು ಇದೊಂದು ಉಪಯುಕ್ತ ಸಲಹೆಯಾಗಿದ್ದು, ಈ ಎರಡೂ ನಗರಗಳ ನಡುವೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿ ಅಗತ್ಯ ಇದೆ. ಬಂದರು ನಗರ ಮಂಗಳೂರಿಗೆ ಸಂಪರ್ಕ ಮಾಡುವುದರಿಂದ ಅನೇಕ ಪ್ರಯೋಜನಗಳು ಆಗಲಿವೆ. ಇದು ಕೂಡ ನಮ್ಮ ಆದ್ಯತೆಯಾಗಿದೆ ಎಂದು ಸೋಮಣ್ಣ ಹೇಳಿದರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…