ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.
ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.
ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಹಾಸನ ನಗರಠಾಣೆ ಇನ್ಸ್‌ಪೆಕ್ಟರ್ ಮೋಹನ್‌ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕೆಎ 51 ಎಂವಿ 8912 ನಂಬರ್‌ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಮನು ಅಡ್ಡ ಹಾಕಿ ನಿಲ್ಲಿಸಿದ್ದ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದ. ಪುಡಿ ರೌಡಿ ಮನುವಿನ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲಿನಲ್ಲಿ ಸೆರೆಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…