Featured

ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಹಸಿರು ನಿಶಾನೆ

ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಆರಂಭಿಸಲಿರುವ ಮೊತ್ತ ಮೊದಲ ವಂದೇ ಭಾರತ್‌ ಹೈಸ್ಪೀಡ್‌ ರೈಲು ಸೇವೆಗೆ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಗಳ ಸಚಿವರಾದ ಸಚಿವ ಅಶ್ವಿನಿ ವೈಷ್ಣವ್‌ ಅವರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದರು.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ಬೆಂಗಳೂರು- ಮಂಗಳೂರು ವಂದೇ ಭಾರತ್ ರೈಲು ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಂತೆ ಮಂಗಳೂರು ಜಂಕ್ಷನ್ ನಲ್ಲಿ ಕೇಂದ್ರ ರೈಲ್ವೆ ಸಚಿವರು ಹಸಿರು ನಿಶಾನೆ ನೀಡುತ್ತಿದ್ದಂತೆಯೇ ರೈಲು ಬೆಂಗಳೂರು ಪ್ರಯಾಣ ಆರಂಭಿಸಿತು.

ಸ್ಮಾರ್ಟ್ ಸಿಟಿ ಮಂಗಳೂರನ್ನು ರಾಜಧಾನಿ ಬೆಂಗಳೂರಿಗೆ ಸಂಪರ್ಕಿಸುವ ವಂದೇ ಭಾರತ್ ಪ್ರಯಾಣದ ಅವಧಿಯನ್ನು ಕಡಿತಗೊಳಿಸಿ, ಆಧುನಿಕ ಹಾಗೂ ವೇಗದ ಪ್ರಯಾಣದ ಅನುಭವ ನೀಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ, ಕಿಶೋರ್ ಕುಮಾರ್, ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ . ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ನೆಹರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ : ಸಿದ್ದರಾಮಯ್ಯ – vishwanews24

ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…

1 hour ago

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  – vishwanews24

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…

2 hours ago

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…

2 hours ago

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

3 hours ago

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ – vishwanews24

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶೀಯರ ಪತ್ತೆ ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ…

3 hours ago

ಕಡಬ : ಪಿಕಪ್ – ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಕಡಬ : ಪಿಕಪ್ - ಕಾರಿನ ನಡುವೆ ಭೀಕರ ಅಪಘಾತ ; ಓರ್ವ ಮೃತ್ಯು, ಇನ್ನೋರ್ವ ಗಂಭೀರ ಕಡಬ: ಹಣ್ಣು…

4 hours ago