Featured

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು

ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ (ಟ್ರಯಲ್) ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ದಿಢೀರನೆ ರದ್ದುಗೊಳಿಸಿದೆ.

ಈ ಕುರಿತು ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ ಪ್ರಯಾಣಿಕ ಸಂಚಾರ ವ್ಯವಸ್ಥಾಪಕರ (CPTM) ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಸಂಬಂಧಪಟ್ಟ ಎಲ್ಲ ವಿಭಾಗಗಳಿಗೆ ಮಾಹಿತಿ ರವಾನಿಸಲಾಗಿದೆ. ಇದರಿಂದಾಗಿ ಟ್ರಯಲ್ ರನ್‌ಗೆ ಸಂಬಂಧಿಸಿದಂತೆ ನಿಗದಿಪಡಿಸಲಾಗಿದ್ದ ಎಲ್ಲ ಕಾರ್ಯಾಚರಣೆಗಳು ಮತ್ತು ಮರು ನಿಗದಿತ ನಿಲ್ದಾಣ ವ್ಯವಸ್ಥೆಗಳನ್ನು ಹಿಂತೆಗೆದುಕೊಳ್ಳಲಾಗಿದೆ.ದಕ್ಷಿಣ ಪಶ್ಚಿಮ ರೈಲ್ವೆಯ ಸಂದೇಶ ಸಂಖ್ಯೆ T.454/YPR-MAQ ವಂದೇ ಭಾರತ್/2026-27(241) ದಿನಾಂಕ 31.05.2026ರ ಪ್ರಕಾರ, ಜೂನ್ 3ರಂದು ಯಶವಂತಪುರ (YPR)–ಮಂಗಳೂರು (MAQ)–ಯಶವಂತಪುರ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಟ್ರಯಲ್ ರನ್ ನಡೆಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ರೂಪಿಸಲಾಗಿದ್ದ ಯೋಜನೆಯ ಪ್ರಕಾರ, ಜೂನ್ 3ರಂದು ಬೆಳಗ್ಗೆ ಯಶವಂತಪುರದಿಂದ ಹೊರಟು ಮಂಗಳೂರು ತಲುಪಿ, ಪುನಃ ಬೆಂಗಳೂರಿಗೆ ಮರಳುವ ರೀತಿಯಲ್ಲಿ 8 ಬೋಗಿಗಳ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿತ್ತು. ರೈಲಿನ ವೇಗ, ಹಳಿ ಸಾಮರ್ಥ್ಯ, ಸುರಂಗ ಹಾಗೂ ಪ್ರಮುಖವಾಗಿ ಶಿರಾಡಿ ಘಾಟ್ ವಿಭಾಗದ ತಾಂತ್ರಿಕ ಅಂಶಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಸಂಚಾರ ಮಹತ್ವ ಪಡೆದಿತ್ತು.

ರೈಲ್ವೆ ಇಲಾಖೆಯು ಟ್ರಯಲ್ ರನ್ ರದ್ದುಗೊಳಿಸುವಿಕೆಗೆ ಯಾವುದೇ ನಿಖರವಾದ ಕಾರಣವನ್ನು ಪ್ರಕಟಿಸಿಲ್ಲ. ಆದರೆ, ಅಗತ್ಯ ರೇಕ್ ಲಭ್ಯತೆ (ರೈಲು ಬೋಗಿಗಳು), ಕಾರ್ಯಾಚರಣಾ ಆದ್ಯತೆಗಳು ಹಾಗೂ ಇತರ ತಾಂತ್ರಿಕ ಕಾರಣಗಳು ಇದಕ್ಕೆ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.

 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

7 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

7 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

8 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

9 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

12 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

12 hours ago