ಮಂಗಳೂರು: ಬೆಂಗಳೂರು- ಮಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಪಶ್ಚಿಮ ಕರಾವಳಿ ರೈಲು ಯಾತ್ರಿ ಅಭಿವೃದ್ಧಿ ಸಮಿತಿಯು ದಕ್ಷಿಣ ಕನ್ನಡ ಸಂಸದರಿಗೆ ಮನವಿ ಮಾಡಿದೆ.
ಪಶ್ಚಿಮ ಕರಾವಳಿ ರೈಲು ಯಾತ್ರಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹನುಮಂತ ಕಾಮತ್ ಹಾಗೂ ಕಾರ್ಯದರ್ಶಿ ಅನಿಲ್ ಹೆಗ್ಡೆ ಜ.6ರಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಭೇಟಿಯಾಗಿ ಮಂಗಳೂರು ಭಾಗದ ರೈಲ್ವೆ ಸಂಬಂಧಿತ ವಿವಿಧ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಕೆಲವು ದಿನಗಳಿಂದ ಬೆಂಗಳೂರು-ಕಣ್ಣೂರು ರೈಲು ನಿರಂತರವಾಗಿ ವಿಳಂಬವಾಗಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರೈಲಿನ ಸಮಯ ಪಾಲನೆ ಸುಧಾರಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಪ್ರಸ್ತಾವಿತ ಮಂಗಳೂರು-ರಾಮೇಶ್ವರ ಸಾಪ್ತಾಹಿಕ ರೈಲನ್ನು ಶೀಘ್ರ ಆರಂಭಿಸಬೇಕು ಹಾಗೂ ಇದೇ ರೈಲಿನ ಬೋಗಿಗಳನ್ನು ಉಪಯೋಗಿಸಿ ವಾರಕ್ಕೆ ಒಂದು ಬಾರಿ ಮಂಗಳೂರು- ಭಾವನಗರ ರೈಲು ಸೇವೆಯನ್ನು ಪ್ರಾರಂಭಿಸಬೇಕೆಂದು ಸಂಸದರನ್ನು ಆಗ್ರಹಿಸಿದರು.
ಪ್ರಸ್ತಾವಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲನ್ನು ಆರಂಭಿಸುವಾಗ, ಈಗ ಬೆಂಗಳೂರು- ಮಂಗಳೂರು ನಡುವೆ ಸಂಚರಿಸುತ್ತಿರುವ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಮಾರ್ಪಾಡು ಮಾಡದೆ ಹಾಗೂ ಅವುಗಳ ಓಡಾಟಕ್ಕೆ ವ್ಯತ್ಯಯವಾಗದಂತೆ ಹೊಸ ರೈಲಿನ ವೇಳಾಪಟ್ಟಿಯನ್ನು ರೂಪಿಸಬೇಕೆಂದು ಸಮಿತಿ ಆಗ್ರಹಿಸಿದರು.
ಮಂಗಳೂರು ಸೆಂಟ್ರಲ್ ಮುಖಾಂತರ ಸಂಚರಿಸುತ್ತಿರುವ ಬೆಂಗಳೂರು-ಕಣ್ಣೂರು ಹಾಗೂ ಬೆಂಗಳೂರು- ಮುರುಡೇಶ್ವರ ರೈಲುಗಳ ಇಂದಿನ ಮಾರ್ಗ ಮತ್ತು ಪ್ರಯಾಣಿಕ ಸ್ನೇಹಿ ವೇಳಾಪಟ್ಟಿಯನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದೆಂದು ಸಂಸದರಿಗೆ ವಿನಂತಿಸಿದರು.
ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಹೊಸ ಸ್ಟೇಬ್ಲಿಂಗ್ ಲೈನ್ ಕಾಮಗಾರಿ ಹಾಗೂ ಮಂಗಳೂರು ಸೆಂಟ್ರಲ್-ಮಂಗಳೂರು ಜಂಕ್ಷನ್ ನಡುವೆ ಬಾಕಿ ಇರುವ 1.6ಕಿ ಮೀ ಹೊಸ ಜೋಡಿ ಹಳಿಗಳ ನಿರ್ಮಾಣದ ವಿಚಾರವನ್ನು ಸಂಸದರ ಗಮನಕ್ಕೆ ತಂದಾಗ, ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.
*ವಿಶ್ವ ದರ್ಜೆಯ ನಿಲ್ದಾಣ ನಿರ್ಮಾಣ ಶೀಘ್ರ ಆರಂಭ: ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಪ್ರಸ್ತಾವಿತ ಮಂಗಳೂರು ಸೆಂಟ್ರಲ್ ನಿಲ್ದಾಣವನ್ನು ವಿಶ್ವ ದರ್ಜೆ ಮಟ್ಟದ ನಿಲ್ದಾಣವಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು ಎಂದು ಮುಂಬೈ ರೈಲು ಯಾತ್ರಿ ಸಂಘದ ಕಾರ್ಯಕಾರಿ ಕಾರ್ಯದರ್ಶಿ ಒಲಿವರ್ ಡಿ ಸೋಜ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…