ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಪತ್ತೆಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುನೈದ್ ಪಾಷಾ ಹಾಗೂ ರಿಜ್ವಾನ್ ಬೇಗ್ ಬಂಧಿತ ಆರೋಪಿಗಳು.
ಆರೋಪಿಗಳು ಬೆಂಗಳೂರಿನಲ್ಲಿ ವಾಸಿಸುತ್ತಿರುವ ನೈಜೀರಿಯಾ ಮೂಲದ ವ್ಯಕ್ತಿಯೊಬ್ಬನಿಂದ ಎಂಡಿಎಂಎ ಮಾದಕ ವಸ್ತು ಪಡೆದು ಮಟನ್ ಶಾಪ್‌ನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಆರೋಪಿಗಳಿಗೆ ಎಂಡಿಎಂಎ ಪೂರೈಸುತ್ತಿದ್ದ ಎನ್ನಲಾದ ನೈಜೀರಿಯಾ ಮೂಲದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸದ್ಯ ಬಂಧಿತ ಆರೋಪಿಗಳಿಂದ 10.60 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್‌ಗಳು, ಒಂದು ಬೈಕ್ ಹಾಗೂ 2,500 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…