Featured

ಬೆಂಗಳೂರು: ಮದರಸಗಳಿಗೆ ಪ್ರತ್ಯೇಕ ಪಠ್ಯಕ್ರಮ ಪರಿಚಯಿಸುವ ಚಿಂತನೆ ಸದ್ಯಕ್ಕೆ ರಾಜ್ಯ ಸರಕಾರದ ಮುಂದೆ ಇಲ್ಲ  : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ – Vishwanews24

ಬೆಂಗಳೂರು: ಮದರಸಗಳಿಗೆ ಪ್ರತ್ಯೇಕ ಪಠ್ಯಕ್ರಮ ಪರಿಚಯಿಸುವ ಚಿಂತನೆ ಸದ್ಯಕ್ಕೆ ರಾಜ್ಯ ಸರಕಾರದ ಮುಂದೆ ಇಲ್ಲ  : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು :  ಮದರಸಾಗಳಿಗಾಗಿ ಪ್ರತ್ಯೇಕ ಪಠ್ಯಕ್ರಮ ಪರಿಚಯಿಸುವ ಚಿಂತನೆ ರಾಜ್ಯ ಸರಕಾರದ ಮುಂದೆ ಸದ್ಯಕ್ಕೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಸಾಮಾನ್ಯ ಶಾಲೆಗಳಲ್ಲಿ ಕಲಿಸುವಂತಹ ಗಣಿತ, ವಿಜ್ಞಾನ, ಇಂಗ್ಲಿಷ್‌ ಮತ್ತಿತರ ವಿಷಯಗಳ ಕಲಿಕೆಗೆ ಆಸಕ್ತರಾಗಿದ್ದಾರೆ. ಆ ಮಕ್ಕಳ ಪೋಷಕರು ಕೂಡ ಈ ನಿಟ್ಟಿನಲ್ಲಿ ಒತ್ತಾಸೆ ಹೊಂದಿದ್ದಾರೆ. ಇದೇ ಕಾರಣಕ್ಕೆ ತಮ್ಮ ಮಕ್ಕಳನ್ನು ಸಾಮಾನ್ಯ ಶಾಲೆಗಳಿಗೆ ಕಳುಹಿಸುತ್ತಿರುವುದನ್ನು ಕಾಣಬಹುದು. ಇದಕ್ಕೆ ಪರ್ಯಾಯವಾಗಿ ಉರ್ದು ಶಾಲೆಗಳಲ್ಲಿ ಹಾಜರಾತಿ ಗಣನೀಯವಾಗಿ ಇಳಿಕೆಯಾಗಿದೆ’ ಎಂದರು.

ಉತ್ತರ ಪ್ರದೇಶದಲ್ಲಿ ಮದರಸಾಗಳಿಗೆ ಪ್ರತ್ಯೇಕ ಪಠ್ಯಕ್ರಮ ಪರಿಚಯಿಸಲು ಅಲ್ಲಿನ ಸರ್ಕಾರ ಮುಂದಾಗಿದೆ. ಸದ್ಯಕ್ಕೆ ನಮ್ಮಲ್ಲಿ ಆ ರೀತಿಯ ಚಿಂತನೆ ಅಥವಾ ಪ್ರಸ್ತಾವನೆ ಇಲ್ಲ. ಆದರೆ, ಮದರಸಾಗಳಿಗೆ ತೆರಳುವ ಮಕ್ಕಳು ಸಾಮಾನ್ಯ ಶಾಲೆಗಳಿಗೆ ತೆರಳುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದರು.

ಆಗಸ್ಟ್‌ 9ರಿಂದ 17ರವರೆಗೆ ಪ್ರತಿ ಶಾಲೆ ಮತ್ತು ಮನೆಗಳ ಮೇಲೆ ರಾಷ್ಟ್ರ ಧ್ವಜಾರೋಹಣ ಮದರಸಾಗಳಿಗೂ ಅನ್ವಯ ಆಗುವಂತೆ ಹೊರಡಿಸಿರುವ ಆದೇಶಕ್ಕೆ ಪ್ರತಿಕ್ರಿಯಿಸಿ, “ಮದರಸಾಗಳೂ ದೇಶದಲ್ಲೇ ಇವೆ. ಈ ರಾಷ್ಟ್ರದ ಧ್ವಜವನ್ನು ಉಳಿದ ಶಾಲೆಗಳಂತೆಯೇ ಮದರಸಾಗಳ ಮೇಲೂ ರಾರಾಜಿಸಬೇಕು. ಆ ಸಮುದಾಯದ ಮುಖಂಡರೂ ಕೂಡ ಈ ಆಶಯ ವ್ಯಕ್ತಪಡಿಸಿದ್ದಾರೆ’ ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

17 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

17 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago